Advertisement
ರಾಜ್ಯ

ಬೆಳ್ಳಾರೆ | ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಹಲವು ನಾಯಕರ ಭೇಟಿ | ಸಾಂತ್ವನ-ನೆರವು | ಖಂಡನೆ-ಕ್ರಮಕ್ಕೆ ಒತ್ತಾಯ |

Share

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ವಿವಿಧ ಪಕ್ಷಗಳ ನಾಯಕರು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ. ಮನೆಯವರಿಗೆ ನೆರವು ನೀಡುತ್ತಿದ್ದಾರೆ. ಹತ್ಯೆಯನ್ನು ಖಂಡಿಸಿ ಆರೋಪಿಗಳಿಗೆ ಶಿಕ್ಷೆಯಾಗಲು ಒತ್ತಾಯಿಸಿದ್ದಾರೆ.  

ಎಲ್ಲಾ ನಾಯಕರು ಭೇಟಿ ನೀಡಿದಾಗಲೂ ಪ್ರವೀಣ್‌ ಮನೆಯವರು, ಆಪ್ತರು, ಕಾರ್ಯಕರ್ತರು ಘಟನೆಯನ್ನು ಖಂಡಿಸಿದ್ದಾರೆ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಬೇಕು, ನಮಗೆ ನ್ಯಾಯ ಸಿಗಬೇಕು ಎಂದು ಕಣ್ಣೀರು ಹಾಕಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರದ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಮುಖ್ಯಮಂತ್ರಿ   ಡಿ ವಿ ಸದಾನಂದ ಗೌಡ ಹೇಳಿದರೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ , ಈ ಪ್ರಕರಣವನ್ನು ಎನ್‌ ಐ ಎ ಗೆ ಒಪ್ಪಿಸಬೇಕು ಎಂದು ಹೇಳಿದ್ದಾರೆ.

ಭಾನುವಾರ ಭೇಟಿ ನೀಡಿದ ಸಚಿವೆ ಶೋಭಾ ಕರಂದ್ಲಾಜೆ  ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ನಗದು, ಅವರ ಒಂದು ತಿಂಗಳ ಸಂಬಳ ಹಾಗೂ ಚೆಕ್ ನೀಡಿದ್ದಾರೆ. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇರಳ ಮಾದರಿಯಲ್ಲಿ ಪ್ರವೀಣ್ ಕೊಲೆಯನ್ನು ಮಾಡಿದ್ದಾರೆ. ಎನ್‌ ಐ ಎ  ತನಿಖೆಯಲ್ಲಿ ನಿಜವಾದ ಆರೋಪಿಗಳು ಸಿಗುತ್ತಾರೆ, ಕಠಿಣ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.

ಮಾಜಿ ಕೇಂದ್ರ ಸಚಿವ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಜು.30ರಂದು ಭೇಟಿ ನೀಡಿದ್ದಾರೆ. ಈ ವೇಳೆ ಮನೆಯವರಿಗೆ ಸಾಂತ್ವನ ಹೇಳಿ 1 ಲಕ್ಷ ರೂ. ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.

ಪ್ರವೀಣ್ ನೆಟ್ಟಾರು ಮನೆಗೆ ಸಂಸದ ತೇಜಸ್ವಿ‌ ಸೂರ್ಯ ಭೇಟಿ‌ ನೀಡಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಿದ ಅವರು ಬಿಜೆಪಿ ರಾಜ್ಯ ಯುವ ಮೋರ್ಚಾದಿಂದ 15 ಲಕ್ಷ ಚೆಕ್ ವಿತರಿಸಿದರು.

ಈಡಿಗ ಸಂಸ್ಥಾನದ  ವಿಖ್ಯಾತಾನಂದ ಸ್ವಾಮೀಜಿ ಹಾಗೂ ಬಿಲ್ಲವ ಸಂಘದ ಪದಾಧಿಕಾರಿಗಳು ಭೇಟಿ ನೀಡಿದರು. ಭಜರಂಗದಳದ ಮುಖಂಡ ಪುನೀತ್‌ ಕೆರೆಹಳ್ಳಿ, ವಿಹಿಂಪ ಪದಾಧಿಕಾರಿಗಳು, ಸ್ವಾಮೀಜಿಗಳು, ಮಹೇಶ್‌ ಶೆಟ್ಟಿ ತಿಮರೋಡಿ ಮೊದಲಾದವರಯ ಭೇಟಿ ನೀಡಿದ್ದರು.

ಹತ್ಯೆಯಾಗಿರುವ ಪ್ರವೀಣ್‌ ನೆಟ್ಟಾರು ಮನೆಗೆ ವಿಧಾನಪರಿಷತ್‌ ಸದಸ್ಯರುಗಳಾದ ಬಿ ಕೆ ಹರಿಪ್ರಸಾದ್‌ ಹಾಗೂ ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ರಮಾನಾಥ ರೈ , ಅಭಯಚಂದ್ರ ಜೈನ್‌, ಹರೀಶ್‌ ಕುಮಾರ್‌ ಮೊದಲಾದವರು ಭೇಟಿ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

9 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

9 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

9 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

13 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago