ಬೆಳ್ಳಾರೆ | ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಹತ್ಯೆ | ನಿನ್ನೆ ನಡೆದದ್ದು ಇಷ್ಟು…. | ಇಂದು ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಸಂಘಟನೆಗಳಿಂದ ಕರೆ | ಶಾಲೆಗಳಿಗೆ ರಜೆ |

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಂಗಳವಾರ ರಾತ್ರಿ  ಹತ್ಯೆಯಾಗಿದ್ದರು. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದರೂ ಫಲಕಾರಿಯಾಗಲಿಲ್ಲ. ಹತ್ಯೆಯಿಂದ ಆಕ್ರೋಶ ಸ್ಫೋಟಗೊಂಡು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕೆಂದು ಪಟ್ಟು ಹಿಡಿದರು. ಜಿಲ್ಲಾಧಿಕಾರಿಗಳು ಆಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಬುಧವಾರ ಶವಯಾತ್ರೆ ನಡೆಸಿ ಬೆಳ್ಳಾರೆಗೆ ತರಲು ನಿರ್ಧರಿಸಲಾಗಿತ್ತು. ಬುಧವಾರ ಸುಳ್ಯ, ಪುತ್ತೂರು, ಕಡಬ ಪ್ರದೇಶದಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್‌ ನಡೆಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಇದೇ ವೇಳೆ ಶಾಲೆಗಳಿಗೂ ರಜೆ ಸಾರಲಾಗಿದೆ.

Advertisement

ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರ ಮೇಲೆ ದಾಳಿ ನಡೆದು ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಮೃತಪಟ್ಟಿರುವುದು ಘೋಷಣೆಯಾಗುತ್ತಲೇ  ಆಸ್ಪತ್ರೆ ಮುಂಭಾಗ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪ್ರವೀಣ್ ಅವರ ಮೃತ ದೇಹ ಪುತ್ತೂರಿನ ಪ್ರಗತಿ ಆಸ್ಪತ್ರೆಯಿಂದ, ಮರಣೋತ್ತರ ಪರೀಕ್ಷೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲು ಪೊಲೀಸರು ಸಿದ್ದತೆ ನಡೆಸಿದರೂ
ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬರುವ ತನಕ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದರು. ಸ್ಥಳಕ್ಕೆ ಸಹಾಯಕ ಕಮೀಶನರ್‌ ಆಗಮಿಸಿದರೂ ಜಿಲ್ಲಾಧಿಕಾರಿ ಆಗಮಿಸಬೇಕು ಎಂದು ಒತ್ತಾಯಿಸಿದರು. ಬಳಿಕ ತಡ ರಾತ್ರಿ  ಜಿಲ್ಲಾಧಿಕಾರಿಗಳು ಆಗಮಿಸಿ ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿದ ಬಳಿಕ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು.  ಇದೇ ವೇಳೆ  ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾದಿಕಾರಿಗಳು ಮನವಿ ಮಾಡಿದರು.

Advertisement

ಸ್ವಯಂಪ್ರೇರಿತ ಬಂದ್‌ ನಡೆಸಲು ಕರೆ:ಪ್ರವೀಣ್‌ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಂದ್ ನಡೆಸಬೇಕೆಂದು ಹಿಂದೂ ಸಂಘಟನೆಗಳು ಕರೆ ನೀಡಿವೆ. ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Advertisement

ಇಂದು ಮೆರವಣಿಗೆ: ಇಂದು  ಶವ ಯಾತ್ರೆ ನಡೆಸಿ ಬೆಳ್ಳಾರೆಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಬೆಳಗ್ಗೆ ಪುತ್ತೂರು ನಗರದಿಂದ  ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ‌ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ನಿರ್ಧರಿಸಿದ್ದಾರೆ.ಸುಳ್ಯ, ಬೆಳ್ಳಾರೆ, ಪುತ್ತೂರು, ಕಡಬ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ.

ಶಾಲೆಗಳಿಗೆ ರಜೆ : ಪ್ರವೀಣ್‌ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು, ಅಂಬಿಕಾ ಕಾಲೇಜು ಹಾಗೂ ಕಡಬ, ಸುಳ್ಯದ ಗ್ರಾಮೀಣ ಭಾಗದಲ್ಲೂ ಶಾಲೆಗಳಿಗೆ ರಜೆ ನೀಡಲಾಗಿದೆ.

Advertisement

ಬಸ್ಸಿಗೆ ಕಲ್ಲುತೂರಾಟ : ಪ್ರವೀಣ್‌ ಹತ್ಯೆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಬಂದ್‌ ಗೆ ಹಿಂದೂ ಸಂಘಟನೆಗಳು ಕರೆ ನೀಡಿದ ಬೆನ್ನಲ್ಲೇ ಪುತ್ತೂರಿನ ಬೊಳುವಾರು ಬಳಿ ಕೆ ಎಸ್‌ ಆರ್‌ ಟಿ  ಸಿ ಬಸ್ಸಿಗೆ ಇಂದು ಬೆಳಗ್ಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ
Advertisement

Be the first to comment on "ಬೆಳ್ಳಾರೆ | ಬಿಜೆಪಿ ಯುವಮೋರ್ಚಾ ಕಾರ್ಯಕರ್ತ ಹತ್ಯೆ | ನಿನ್ನೆ ನಡೆದದ್ದು ಇಷ್ಟು…. | ಇಂದು ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಸಂಘಟನೆಗಳಿಂದ ಕರೆ | ಶಾಲೆಗಳಿಗೆ ರಜೆ |"

Leave a comment

Your email address will not be published.


*