ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಂಗಳವಾರ ರಾತ್ರಿ ಹತ್ಯೆಯಾಗಿದ್ದರು. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದರೂ ಫಲಕಾರಿಯಾಗಲಿಲ್ಲ. ಹತ್ಯೆಯಿಂದ ಆಕ್ರೋಶ ಸ್ಫೋಟಗೊಂಡು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಬೇಕೆಂದು ಪಟ್ಟು ಹಿಡಿದರು. ಜಿಲ್ಲಾಧಿಕಾರಿಗಳು ಆಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಬುಧವಾರ ಶವಯಾತ್ರೆ ನಡೆಸಿ ಬೆಳ್ಳಾರೆಗೆ ತರಲು ನಿರ್ಧರಿಸಲಾಗಿತ್ತು. ಬುಧವಾರ ಸುಳ್ಯ, ಪುತ್ತೂರು, ಕಡಬ ಪ್ರದೇಶದಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ನಡೆಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಇದೇ ವೇಳೆ ಶಾಲೆಗಳಿಗೂ ರಜೆ ಸಾರಲಾಗಿದೆ.
ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರ ಮೇಲೆ ದಾಳಿ ನಡೆದು ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಪ್ರವೀಣ್ ನೆಟ್ಟಾರ್ ಮೃತಪಟ್ಟಿರುವುದು ಘೋಷಣೆಯಾಗುತ್ತಲೇ ಆಸ್ಪತ್ರೆ ಮುಂಭಾಗ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪ್ರವೀಣ್ ಅವರ ಮೃತ ದೇಹ ಪುತ್ತೂರಿನ ಪ್ರಗತಿ ಆಸ್ಪತ್ರೆಯಿಂದ, ಮರಣೋತ್ತರ ಪರೀಕ್ಷೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲು ಪೊಲೀಸರು ಸಿದ್ದತೆ ನಡೆಸಿದರೂ
ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬರುವ ತನಕ ಮೃತದೇಹವನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದರು. ಸ್ಥಳಕ್ಕೆ ಸಹಾಯಕ ಕಮೀಶನರ್ ಆಗಮಿಸಿದರೂ ಜಿಲ್ಲಾಧಿಕಾರಿ ಆಗಮಿಸಬೇಕು ಎಂದು ಒತ್ತಾಯಿಸಿದರು. ಬಳಿಕ ತಡ ರಾತ್ರಿ ಜಿಲ್ಲಾಧಿಕಾರಿಗಳು ಆಗಮಿಸಿ ಪ್ರತಿಭಟನಾಕಾರರ ಜತೆ ಮಾತುಕತೆ ನಡೆಸಿದ ಬಳಿಕ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಇದೇ ವೇಳೆ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾದಿಕಾರಿಗಳು ಮನವಿ ಮಾಡಿದರು.
ಸ್ವಯಂಪ್ರೇರಿತ ಬಂದ್ ನಡೆಸಲು ಕರೆ:ಪ್ರವೀಣ್ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಂದ್ ನಡೆಸಬೇಕೆಂದು ಹಿಂದೂ ಸಂಘಟನೆಗಳು ಕರೆ ನೀಡಿವೆ. ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಇಂದು ಮೆರವಣಿಗೆ: ಇಂದು ಶವ ಯಾತ್ರೆ ನಡೆಸಿ ಬೆಳ್ಳಾರೆಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಬೆಳಗ್ಗೆ ಪುತ್ತೂರು ನಗರದಿಂದ ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ನಿರ್ಧರಿಸಿದ್ದಾರೆ.ಸುಳ್ಯ, ಬೆಳ್ಳಾರೆ, ಪುತ್ತೂರು, ಕಡಬ ಪ್ರದೇಶದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಶಾಲೆಗಳಿಗೆ ರಜೆ : ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು, ಅಂಬಿಕಾ ಕಾಲೇಜು ಹಾಗೂ ಕಡಬ, ಸುಳ್ಯದ ಗ್ರಾಮೀಣ ಭಾಗದಲ್ಲೂ ಶಾಲೆಗಳಿಗೆ ರಜೆ ನೀಡಲಾಗಿದೆ.
ಬಸ್ಸಿಗೆ ಕಲ್ಲುತೂರಾಟ : ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಸಂಘಟನೆಗಳು ಕರೆ ನೀಡಿದ ಬೆನ್ನಲ್ಲೇ ಪುತ್ತೂರಿನ ಬೊಳುವಾರು ಬಳಿ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಇಂದು ಬೆಳಗ್ಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆದಿದೆ.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…