ಬೆಂಗಳೂರು ಕೃಷಿ ಮೇಳ | ಸಿರಿಧಾನ್ಯ ಬೆಳೆದರಷ್ಟೇ ಸಾಲದು, ಮೌಲ್ಯವರ್ಧನೆಯೂ ಅಗತ್ಯವಿದೆ |

November 20, 2023
1:21 PM

ಸಿರಿಧಾನ್ಯಗಳ ಬಳಕೆ ಬಗ್ಗೆ ಇತ್ತೀಚಿನ ದಿನಗಳಲ್ಲಿ ಅರಿವು ಜಾಸ್ತಿಯಾಗುತ್ತಿದೆ. ಹಾಗೇ ಇದಕ್ಕೆ ವಿವಿಧ ರೀತಿಯಲ್ಲಿ ಮೌಲ್ಯವರ್ಧನೆ ಮಾಡುವ ನಿಟ್ಟಿನಲ್ಲಿ ಅನೇಕ ಪ್ರಯೋಗಗಳನ್ನು ಮಾಡಲಾಗುತ್ತಿದೆ. ರಾಜಧಾನಿ ಬೆಂಗಳೂರು(Bengaluru) ಕೃಷಿ ವಿಶ್ವವಿದ್ಯಾಲಯ(GKVK) ಆವರಣದಲ್ಲಿ ನಡೆಯುತ್ತಿರುವ ಕೃಷಿಮೇಳದಲ್ಲಿ(Krushi Mela)ಸಿರಿಧಾನ್ಯ ಮೇಳ(Millet) ಜನರನ್ನು ಆಕರ್ಷಿಸಿಸುತ್ತಿದೆ. ಆರೋಗ್ಯಕರ ಜೀವನ ಶೈಲಿಗೆ(Healthy Life style) ಸಿರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದ ಈ ಬಾರಿಯ ಕೃಷಿ ಮೇಳದಲ್ಲಿ  ‘ಸಿರಿಧಾನ್ಯ ಆಹಾರ ಮೇಳ’ವನ್ನು ಹಮ್ಮಿಕೊಳ್ಳಲಾಗಿತ್ತು.

Advertisement
Advertisement

ಸುಮಾರು ಸಿರಿಧಾನ್ಯ ಮಳಿಗೆಗಳನ್ನು ಸ್ಥಾಪಿಸಿದ್ದು, ಸ್ವಸಹಾಯ ಸಂಘಗಳು ಸಿರಿಧಾನ್ಯಗಳಿಂದ ತಯಾರಿಸಿರುವ ಇಡ್ಲಿ, ಚಕ್ಕುಲಿ, ಪಿಜಾ, ಕೇಕ್, ಕುಕ್ಕಿಸ್, ಚಾಕೊಲೇಟ್, ಉಂಡೆ ಸೇರಿದಂತೆ ನಾನಾ ಪದಾರ್ಥಗಳು ಆಹಾರ ಪ್ರೇಮಿಗಳನ್ನು ಅಕರ್ಷಿಸಿದವು. ರೈತರು ಬೆಳೆದ ಸಿರಿಧಾನ್ಯ ಬೆಳೆಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಆರೋಗ್ಯಕರ ಜೀವನ ಶೈಲಿಗೆ ಸಿರಿಧಾನ್ಯಗಳ ಮಹತ್ವ ತಿಳಿಸುವ ಉದ್ದೇಶದಿಂದ ಕೃಷಿ ಮೇಳದಲ್ಲಿ ಸ್ಥಾಪಿಸಿದ್ದ ಸಿರಿಧಾನ್ಯ ಆಹಾರ ಮೇಳ ಎಲ್ಲರ ಮೆಚ್ಚುಗೆ ಗಳಿಸಿತು.

ಕೃಷಿ ಮೇಳದಲ್ಲಿ ನವೋದ್ಯಮಗಳಿಗೆ ಸಿರಿಧಾನ್ಯದ ಉಪ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಾಡಲು ಪ್ರತ್ಯೇಕ ಮಳಿಗೆಗಳನ್ನು ತೆರೆಯಲಾಗಿದೆ. ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಿರಿಧಾನ್ಯ ಉತ್ಪನ್ನ ಉತ್ಪಾದಕರಿಗೆ ಉಚಿತವಾಗಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ.

ಶನಿವಾರ ಮುಂಜಾನೆಯಿಂದ ಸಂಜೆವರೆಗೆ ಸಿರಿಧಾನ್ಯದಿಂದ ತಯಾರಿಸಿದ ಪಕೋಡಾ, ಚಕ್ಕುಲಿ, ಬಿಸ್ಕೆಟ್, ಚಾಕೊಲೇಟ್, ಪಿಜ್ಜಾ ಕೇಕ್, ಪೇಸ್ಟರಿ, ನಿಪ್ಪಟ್ಟು, ರಾಗಿ ಲಡ್ಡು, ಸಿಹಿ ತಿನಿಸುಗಳು, ಪಕೋಡಾ, ಮಸಾಲೆ ವಡೆ, ದೋಸೆ, ಪಲಾವ್, ಉಪ್ಪಿಟ್ಟು, ಹಲ್ವಾ, ಅಂಬಲಿ, ಕೇಸರಿ ಬಾತ್, ಉಂಡೆ, ಜಾಮೂನ್, ಕಿಚಡಿ, ಬರ್ಫಿ ಸೇರಿದಂತೆ ನಾನಾ ಬಗೆಯ ತಿನಿಸುಗಳನ್ನು ಗ್ರಾಹಕರ ವೀಕ್ಷಿಸಿ ಖರೀದಿಸಿದರು. ಕೃಷಿ ವಿಶ್ವವಿದ್ಯಾಲಯದ ಆಹಾರ ವಿಜ್ಞಾನ ವಿಭಾಗದ ಮುಖ್ಯಸ್ಥ ಕೆ ಜಿ ವಿಜಯಲಕ್ಷ್ಮಿ ಮಾತನಾಡಿ, 2023ರನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಮಾರುಕಟ್ಟೆ ಒದಗಿಸಲು ಹಾಗೂ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಿರಿಧಾನ್ಯ ಮೇಳಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಆರೋಗ್ಯದ ಕಣಜ ಸಿರಿಧಾನ್ಯ: ಜೋಳ, ರಾಗಿ, ಸಜ್ಜೆ, ನವಣೆ, ಬರಗು, ಕೊರಲೆ, ಸಾಮೆ, ಊದಲು, ಹಾರಕ 9 ಸಿರಿ ಧಾನ್ಯಗಳು ಆರೋಗ್ಯ ವೃದ್ಧಿಯಲ್ಲಿ ಸಹಕಾರಿ ಆಗಿವೆ. ಸಿರಿಧಾನ್ಯಗಳಲ್ಲಿ ಅಧಿಕ ನಾರಿನಂಶ, ಪೋಷಕಾಂಶ, ಖನಿಜಾಂಶ ಹೇರಳವಾಗಿದೆ. ಇದರಿಂದ ರಕ್ತದೊತ್ತಡ, ಮಧುಮೇಹ, ಬೊಜ್ಜು, ಮಲಬದ್ಧತೆ, ಅಂಡಾಶಯ ಸಮಸ್ಯೆ. ಮುಟ್ಟಿನ ಸಮಸ್ಯೆ, ನರ ದೌರ್ಬಲ್ಯ, ಮೂರ್ಛ ರೋಗ, ರಕ್ತ ಹೀನತೆ, ಲಿವರ್, ಕಿಡ್ನಿ ಸಮಸ್ಯೆ, ಜೀರ್ಣಾಂಗದ ಸಮಸ್ಯೆ, ಹೃದ್ರೋಗ, ಕ್ಯಾನ್ಸರ್ ಸಮಸ್ಯೆ ಸಮಸ್ಯೆ ಇರುವವವರು ನಿತ್ಯ ಸಿರಿಧಾನ್ಯ ಸೇವನೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು ಎಂದು ಕೆ ಜಿ ವಿಜಯಲಕ್ಷ್ಮಿ ತಿಳಿಸಿದರು.

Advertisement
  • ಅಂತರ್ಜಾಲ ಮಾಹಿತಿ
At the Krushi Mela held on the premises of Bengaluru Agricultural University (GKVK), the Millet is attracting crowds. With the aim of conveying the importance of cereals for a healthy life style, a 'Cereal Food Fair' was organized in this Krishi Mela.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು
May 22, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group