2024 ನೇ ಇಸವಿಯಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ದಾಖಲೆಯ 4 ಕೋಟಿ ತಲುಪಿದೆ. ಕಳೆದ ವರ್ಷ ಅಕ್ಟೋಬರ್ 20 ರಂದು ಒಂದೇ ದಿನ ಬೆಂಗಳೂರು ವಿಮಾನ ನಿಲ್ದಾಣದಿಂದ 1,26,532 ಪ್ರಯಾಣಿಕರು ತೆರಳಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
Advertisement
ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ವಾರ್ಷಿಕ ಸರಕು ಸಾಗಾಟ ಪ್ರಮಾಣ 496227 ಮೆಟ್ರಿಕ್ ಟನ್ ತಲುಪುವ ಮೂಲಕ ಗರಿಷ್ಠ ದಾಖಲೆ ನಿರ್ಮಾಣವಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ 75 ದೇಶೀಯ ಮತ್ತು 30 ಅಂತಾರಾಷ್ಟ್ರೀಯ ಸ್ಥಳಗಳಿಗೆ ವಿಮಾನ ಸೇವೆಯನ್ನು ಒದಗಿಸಲಾಗುತ್ತಿದೆ. ಹಲವು ಜಾಗತಿಕ ವಿಮಾನಯಾನ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೆಚ್ಚಿಸಿಕೊಳ್ಳಲಾಗಿದೆ. ಸರಕು ಸಾಗಾಟ ವಿಭಾಗದಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ 2024 ರಲ್ಲಿ ದಾಖಲೆ ಪ್ರಮಾಣದಲ್ಲಿ ಗುಲಾಬಿ ಹೂವು, ಮಾವಿನ ಹಣ್ಣು ರಫ್ತು ಮಾಡಲಾಗಿದೆ ಎಂದು ಬೆಂಗಳೂರು ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement