ಜಾಗತಿಕ ಮಟ್ಟದಲ್ಲಿ ಖ್ಯಾತಿಗೆ ಪಾತ್ರವಾದ ಬೆಂಗಳೂರಿಗೆ ಇನ್ನೊಂದು ಹಿರಿಮೆ ದೊರೆತಿದೆ. ಜಗತ್ತಿನ ಯಾವ ದೇಶಕ್ಕೇ ಹೋಗಿ, ಬೆಂಗಳೂರಿನ ಹೆಸರು ಎಲ್ಲೆಲ್ಲೂ ಕೇಳಿಸುತ್ತದೆ. ವಿದೇಶಿಗರಿಗೆ ನಮ್ಮ ಬೆಂಗಳೂರು ಅಚ್ಚುಮೆಚ್ಚಿನ ತಾಣ. ಹೀಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿಗೆ ಪಾತ್ರವಾದ ಬೆಂಗಳೂರಿಗೆ ಇನ್ನೊಂದು ಹಿರಿಮೆ ದೊರೆತಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ. ಪ್ರಯಾಣಿಕರಿಂದ ವಿಮಾನ ನಿಲ್ದಾಣಗಳಲ್ಲಿ ಸಂಗ್ರಹಿಸಲಾದ ಸಮೀಕ್ಷೆಗಳ ಮೂಲಕ ನೇರ ಸಂಶೋಧನೆಯ ಆಧಾರದ ಮೇಲೆ ಈ ಹೆಗ್ಗಳಿಕೆ ದೊರೆತಿದೆ.
ಏರ್ಪೋರ್ಟ್ ಕೌನ್ಸಿಲ್ ಇಂಟರ್ನ್ಯಾಶನಲ್ 2022ರ ಸಾಲಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಅಭಿದಾನ ನೀಡಿದೆ. ವಿಶ್ವಾದ್ಯಂತ ಪರಿಗಣಿಸಲಾದ 15 ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ.
ವಿಶ್ವಾದ್ಯಂತ ಪರಿಗಣಿಸಲಾದ 15 ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ.
ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ನ (ಬಿಐಎಎಲ್) ಎಂಡಿ ಮತ್ತು ಸಿಇಒ ಹರಿ ಮರಾರ್, “ಈ ಮನ್ನಣೆಯು ಕೆಐಎ ತಂಡದ ಬದ್ಧತೆಯನ್ನು ಎತ್ತಿಹಿಡಿದಿದೆ. ತಡೆರಹಿತ ಆಗಮನ ಪ್ರಕ್ರಿಯೆಯನ್ನು ಸಕ್ರಿಯಗೊಳಿಸಿದ್ದಕ್ಕಾಗಿ ಪ್ರಯಾಣಿಕರಿಗೆ ಮತ್ತು ವಿಮಾನ ನಿಲ್ದಾಣದಲ್ಲಿನ ವಲಸೆ, ಕಸ್ಟಮ್ಸ್ ಮತ್ತು ಸಿಐಎಸ್ಎಫ್ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…