Advertisement
MIRROR FOCUS

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

Share

ಬೆಂಗಳೂರು ನಗರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ. ಕಸ ಸಾಗಾಣಿಕೆಗೆ ತಡೆ ಒಡ್ಡುವವರ ವಿರುದ್ಧ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರು ನಗರದಲ್ಲಿ ಕಸ ವಿಲೇವಾರಿಗಾಗಿ ಈಗಾಗಲೇ ಅನುಸರಿಸುತ್ತಿರುವ ಪದ್ಧತಿಯನ್ನೇ ಮುಂದುವರಿಸಲಾಗುತ್ತಿದೆ. ಆದರೆ ಅಭಿವೃದ್ಧಿಗೆ ಹೆಚ್ಚಿನ ಹಣ ನೀಡಬೇಕೆಂದು ಒತ್ತಡ ತಂದು, ಕೆಲವರು ಕಸ ಸಾಗಾಣಿಕೆಗೆ ಅಡ್ಡಿಪಡಿಸುತ್ತಿದ್ದಾರೆ. ಇದು ಸರಿಯಲ್ಲ” ಎಂದು ಹೇಳಿದರು.

ಇನ್ನು ಮುಂದೆ ಕಸ ಸಾಗಾಣಿಕೆಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ, ಅಡ್ಡಿಪಡಿಸುವವರ ಮನೆಯ ಮುಂದೆಯೇ ಕಸ ಸುರಿಯುವಂತಹ ಕ್ರಮಕ್ಕೂ ಸರ್ಕಾರ ಮುಂದಾಗಲಿದೆ ಎಂದು ಅವರು ಎಚ್ಚರಿಸಿದರು.

ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪ ಮಾಡುತ್ತಿರುವ ಗುತ್ತಿಗೆದಾರರ ಸಂಘದವರು, ತಮ್ಮ ಆರೋಪಗಳಿಗೆ ಸಂಬಂಧಿಸಿದಂತೆ ಅಧಿಕೃತವಾಗಿ ದೂರು ದಾಖಲಿಸಬಹುದು ಎಂದು ಅವರು ಹೇಳಿದರು. ಈ ಹಿಂದೆ ನಿಗದಿತ ಮೊತ್ತಕ್ಕಿಂತಲೂ ಹೆಚ್ಚಿನ ಕಾಮಗಾರಿಗಳನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಆದರೂ ಸರ್ಕಾರ ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಕಸ ವಿಲೇವಾರಿ ಪ್ರಮುಖ ಸೇವೆಯಾಗಿದ್ದು, ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Karnataka Deputy Chief Minister D.K. Shivakumar has warned that strict action will be taken under the ESMA Act against anyone obstructing garbage disposal in Bengaluru. He stated that waste management is an essential public service and the government will not tolerate disruptions. The government also invited contractors alleging corruption to file formal complaints.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

12 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

12 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

13 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

21 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago