Advertisement
MIRROR FOCUS

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

Share

ಬೆಂಗಳೂರು ನಗರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ. ಕಸ ಸಾಗಾಣಿಕೆಗೆ ತಡೆ ಒಡ್ಡುವವರ ವಿರುದ್ಧ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರು ನಗರದಲ್ಲಿ ಕಸ ವಿಲೇವಾರಿಗಾಗಿ ಈಗಾಗಲೇ ಅನುಸರಿಸುತ್ತಿರುವ ಪದ್ಧತಿಯನ್ನೇ ಮುಂದುವರಿಸಲಾಗುತ್ತಿದೆ. ಆದರೆ ಅಭಿವೃದ್ಧಿಗೆ ಹೆಚ್ಚಿನ ಹಣ ನೀಡಬೇಕೆಂದು ಒತ್ತಡ ತಂದು, ಕೆಲವರು ಕಸ ಸಾಗಾಣಿಕೆಗೆ ಅಡ್ಡಿಪಡಿಸುತ್ತಿದ್ದಾರೆ. ಇದು ಸರಿಯಲ್ಲ” ಎಂದು ಹೇಳಿದರು.

ಇನ್ನು ಮುಂದೆ ಕಸ ಸಾಗಾಣಿಕೆಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ, ಅಡ್ಡಿಪಡಿಸುವವರ ಮನೆಯ ಮುಂದೆಯೇ ಕಸ ಸುರಿಯುವಂತಹ ಕ್ರಮಕ್ಕೂ ಸರ್ಕಾರ ಮುಂದಾಗಲಿದೆ ಎಂದು ಅವರು ಎಚ್ಚರಿಸಿದರು.

ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪ ಮಾಡುತ್ತಿರುವ ಗುತ್ತಿಗೆದಾರರ ಸಂಘದವರು, ತಮ್ಮ ಆರೋಪಗಳಿಗೆ ಸಂಬಂಧಿಸಿದಂತೆ ಅಧಿಕೃತವಾಗಿ ದೂರು ದಾಖಲಿಸಬಹುದು ಎಂದು ಅವರು ಹೇಳಿದರು. ಈ ಹಿಂದೆ ನಿಗದಿತ ಮೊತ್ತಕ್ಕಿಂತಲೂ ಹೆಚ್ಚಿನ ಕಾಮಗಾರಿಗಳನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಆದರೂ ಸರ್ಕಾರ ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.

ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಕಸ ವಿಲೇವಾರಿ ಪ್ರಮುಖ ಸೇವೆಯಾಗಿದ್ದು, ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

Karnataka Deputy Chief Minister D.K. Shivakumar has warned that strict action will be taken under the ESMA Act against anyone obstructing garbage disposal in Bengaluru. He stated that waste management is an essential public service and the government will not tolerate disruptions. The government also invited contractors alleging corruption to file formal complaints.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸಾವಯವ ಮತ್ತು ಪುನರುತ್ಪಾದಕ ಕೃಷಿ – ಮಣ್ಣಿನ ಆರೋಗ್ಯವೇ ಕೃಷಿಯ ಭವಿಷ್ಯ

ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ…

7 hours ago

ಪರಿಸರ ಸಮತೋಲನಕ್ಕೆ ಗಿಡ-ಮರಗಳೇ ಆಧಾರ – ಪ್ರತಿಯೊಬ್ಬರೂ ವಿಶೇಷ ಸಂದರ್ಭಗಳಲ್ಲಿ ಗಿಡ ನೆಡಬೇಕು

ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ…

14 hours ago

ಹವಾಮಾನ ವರದಿ | 12-11-2026 | ನ.15–16 ರಂದು ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂದಿನ 10 ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ರಾತ್ರಿ…

14 hours ago

ಪೊಲೀಸ್ ಕಾನ್ಸ್‌ಟೇಬಲ್‌, ಹೆಡ್ ಕಾನ್ಸ್‌ಟೇಬಲ್‌ಗಳಿಗೆ ‘ಖಾಕಿ ವಿಜಿಲ್ ಗಾರ್ಡ್’ ಕಡ್ಡಾಯ – ಡಿಜಿಪಿ ಎಂ.ಎ. ಸಲೀಂ ಆದೇಶ

ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್‌ಗಳು ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳಿಗೆ ನೂತನ ‘ಖಾಕಿ ವಿಜಿಲ್…

19 hours ago

ದಾವಣಗೆರೆಯಲ್ಲಿ 18,357 ತೋಟಗಾರಿಕಾ ಬೆಳೆಗಾರರಿಗೆ ₹88 ಕೋಟಿ ಬೆಳೆ ವಿಮೆ ಪರಿಹಾರ – ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಮೊತ್ತ

ದಾವಣಗೆರೆ ಜಿಲ್ಲೆಯ 18,357 ತೋಟಗಾರಿಕಾ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…

19 hours ago

ಬಿಪಿಎಲ್‌ ಪಡಿತರ ಚೀಟಿ ಇ-ಕೆವೈಸಿ ಗಡುವು ನ.30ರವರೆಗೆ ವಿಸ್ತರಣೆ

ರಾಜ್ಯದಲ್ಲಿ ಬಿಪಿಎಲ್‌ ಪಡಿತರ ಚೀಟಿಗಳ ಇ-ಕೆವೈಸಿ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು…

19 hours ago