Advertisement
ಸುದ್ದಿಗಳು

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

Share

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಭಾರೀ ಮಳೆ ಸುರಿದಿದ್ದು, ನಗರದ ಹಲವು ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿವೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ವಾಹನ ಸಂಚಾರಕ್ಕೂ ಅಡ್ಡಿಯುಂಟಾಗಿ, ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಪರದಾಡುವಂತಾಯಿತು.

ಸಂಜೆ ವೇಳೆಗೆ ಏಕಾಏಕಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಹಲವು ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಧಾನಗೊಂಡು, ಕೆಲವೆಡೆ ವಾಹನಗಳ ಓಡಾಟಕ್ಕೂ ತೊಂದರೆಯಾಗಿದೆ.

ಸೆಪ್ಟೆಂಬರ್ 15ರಂದು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಬೆಂಗಳೂರಿನಲ್ಲಿ ಗಂಟೆಗೆ 30–40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯ ಸಾಧ್ಯತೆಯನ್ನೂ ಸೂಚಿಸಲಾಗಿತ್ತು.

ಇನ್ನೂ ಎರಡು ದಿನ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ. ಹೀಗಾಗಿ ವಾಹನ ಸವಾರರು ತಗ್ಗು ಪ್ರದೇಶಗಳು, ಜಲಾವೃತ ರಸ್ತೆಗಳು ಹಾಗೂ ಸಂಚಾರ ದಟ್ಟಣೆ ಇರುವ ಮಾರ್ಗಗಳಲ್ಲಿ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.

Bengaluru witnessed a sudden spell of heavy rain on Tuesday evening, leaving several roads waterlogged and disrupting traffic. The downpour lasted for more than an hour, causing difficulties for commuters returning home. Weather forecasts indicate that rain may continue in Bengaluru over the next two days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

2 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

2 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

2 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

13 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

21 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago