#CauveryWater | ಕಾವೇರಿದ ಕಾವೇರಿ ಹೋರಾಟ | ಮಂಗಳವಾರ ಬೆಂಗಳೂರು, ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ | ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್ |

September 25, 2023
9:40 AM
ಮಂಗಳವಾರದಂದು ಬೆಂಗಳೂರು ಬಂದ್​​ಗೆ ಕರೆ ನೀಡಲಾಗಿದೆ. ಈ ನಡುವೆ ರಾಜ್ಯಸರ್ಕಾರ, ಕೇಂದ್ರ ಸರ್ಕಾರಕ್ಕೂ ಬಿಸಿ ಮುಟ್ಟಿಸಲು ಮುಂದಾಗಿರೋ ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರ ಶುಕ್ರವಾರದಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿದ್ದಾರೆ.

ರಾಜ್ಯದಲ್ಲಿ ನೀರಿಲ್ಲದಿರುವಾಗ ತಮಿಳುನಾಡಿಗೆ (Tamilnadu) ಕಾವೇರಿ (Cauvery) ನೀರು ಹರಿಸಿರುವ ಬಗ್ಗೆ ರಾಜ್ಯದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದೇ ವಾರದಲ್ಲಿ ಎರಡೆರಡು ಬಾರಿ ಬಂದ್‌ಗೆ ರೂಪುರೇಷೆ ಸಿದ್ದವಾಗುತ್ತಿದೆ. ಬೆಂಗಳೂರು ಬಂದ್ (Bengaluru Bandh) ರಾಮನಗರ ಬಂದ್ (Ramanagara Bandh), ಅಖಂಡ ಕರ್ನಾಟಕ ಬಂದ್ (Karnataka Bandh)

ಕನ್ನಡ ಸಂಘಟನೆಗಳು ಸಭೆನಮಗೇ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ಕೆಆರ್​ಎಸ್ ಡ್ಯಾಂನಿಂದ ನೀರು ಹರಿಸುತ್ತಿರೋದಕ್ಕೆ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ. ಇದನ್ನ ವಿರೋಧಿಸಲೆಂದೇ ಮಂಗಳವಾರದಂದು ಬೆಂಗಳೂರು ಬಂದ್​​ಗೆ ಕರೆ ನೀಡಲಾಗಿದೆ. ಈ ನಡುವೆ ರಾಜ್ಯಸರ್ಕಾರ, ಕೇಂದ್ರ ಸರ್ಕಾರಕ್ಕೂ ಬಿಸಿ ಮುಟ್ಟಿಸಲು ಮುಂದಾಗಿರೋ ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರ ಶುಕ್ರವಾರದಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ನಾಳೆಯೇ ಕನ್ನಡ ಸಂಘಟನೆಗಳು ಸಭೆ ಸೇರಿ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬೆಂಗಳೂರು ಬಂದ್ ಜೊತೆ ಕರ್ನಾಟಕ ಬಂದ್ ಅನ್ನೂ ಮಾಡಲು ಸಂಘಟನೆಗಳು ನಿರ್ಧರಿಸಿದೆ. ನಾಳೆ ಈ ಬಗ್ಗೆ ಖಾಸಗಿ ಹೋಟೆಲ್​​ನಲ್ಲಿ ಸಭೆ ಸೇರಿ ಚರ್ಚಿಸಿ ಕರ್ನಾಟಕ ಬಂದ್​​ ಸ್ವರೂಪದ ಬಗ್ಗೆ ನಿರ್ಧರಿಸಲಿದ್ದಾರೆ. ಬೆಂಗಳೂರು ಬಂದ್​​ಗೆ ಬಿಜೆಪಿ ಕೂಡ ಬೆಂಬಲಿಸಿದೆ. ಇದಕ್ಕೆ ನಮ್ಮ ಬೆಂಬಲ ಇದೆ ಅಂತ ಬಿಎಸ್​ವೈ ಹೇಳಿದ್ದಾರೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಂದ್​​ಗೆ ನಮ್ಮ ಬೆಂಬಲ ಇದೆ ಎಂದಿದ್ದಾರೆ. ಮಂಗಳವಾರ ಬಂದ್ ನಡೆಯುತ್ತೆ, ಶಾಂತಿಯುತವಾಗಿ ಬಂದ್ ಮಾಡುತ್ತೇವೆ. ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ಆಗುತ್ತೆ, ಟೌನ್ ಹಾಲ್​​ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೂ ಶಾಂತಿಯುತ ಪ್ರತಿಭಟನೆ ನಡೆಯುತ್ತೆ. ನಾವು ಇದನ್ನ ತೇವಲಿಗಾಗಿ ಬಂದ್ ಮಾಡ್ತಿಲ್ಲ. ಸರ್ಕಾರ ನಮ್ಮನ್ನ ನಿರ್ಲಕ್ಷ್ಯ ಮಾಡಬಾರದು, ಈ ಬಂದ್ ಪ್ರತಿಷ್ಠೆ ಬಂದ್ ಅಲ್ಲ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.  ಬೆಂಗಳೂರು ಬಂದ್​​ಗೆ ಸಾರಿಗೆ ನೌಕರರ ಸಂಘ ಬೆಂಬಲ ಘೋಷಿಸಿದೆ.

ರಾಜಧಾನಿಯಲ್ಲಿ ಬಿಎಂಟಿಸಿ ಬಸ್ ಇಳಿಯಲ್ಲ ಅಂತ ಸಾರಿಗೆ ಸಿಬ್ಬಂದಿ ಸಂಘಟನೆ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದಾರೆ. ಆದರೆ ಸಾರಿಗೆ ನೌಕರರಿಗೆ ಬಿಎಂಟಿಸಿ ಅಲರ್ಟ್ ಆಗಿದೆ. ಮಂಗಳವಾರ ನೌಕರರ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಿದೆ. ವಾರದ ರಜೆ, ದೀರ್ಘಕಾಲದ ರಜೆ ಹೊರತುಪಡಿಸಿ ಎಲ್ಲಾ ನೌಕರರು ಕಡ್ಡಾಯವಾಗಿ ಹಾಜರಿರುವಂತೆ ಸೂಚನೆ ಕೊಟ್ಟಿದೆ. ಈ ಬಂದ್​​ಗೆ ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ, ವಕೀಲರ ಸಂಘ, ಆಟೋ ಚಾಲಕರ ಸಂಘ ಸೇರಿ ಹಲವು ಸಮುದಾಯಗಳು ಬೆಂಬಲ ನೀಡಿದೆ. ಮಂಗಳವಾರ ಬೆಳಿಗ್ಗೆ 6ರಿಂದ ಸಂಜೆ 6ವರೆಗೂ ತುರ್ತುಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಲಿದೆ.

ಕಾವೇರಿ ಹೋರಾಟದ ಬಗ್ಗೆ ನಟ ದರ್ಶನ್‌ ಗರಂ : ಇದೇ ವೇಳೆ ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್#Darshan ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ ಎಂಬ ಕೂಗಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದರ್ಶನ್, ಸುದೀಪ್, ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ ಎಂದು ಪ್ರಶ್ನಿಸಿದ್ದಾರೆ. ಮೊನ್ನೆ ಬಂದ ತಮಿಳು ಚಿತ್ರದಲ್ಲಿ ಕರ್ನಾಟಕದಲ್ಲೇ ಕೋಟಿ ಕೋಟಿ ಮಾಡಿದವನು ನಿಮಗೆ ಕಾಣ್ತಿಲ್ವ? ಕರ್ನಾಟಕದಲ್ಲೇ ಒಬ್ಬ ವಿತರಕ ತಮಿಳು ಚಿತ್ರದಿಂದ ಕರ್ನಾಟಕದದಲ್ಲೇ 36 ಕೋಟಿ ರೂ. ಮಾಡಿದ. 6 ಕೋಟಿ ಹಾಕಿ 36 ಕೋಟಿ ಮಾಡಿದ. ಅವನಿಗೆ ಯಾಕೆ ನೀವು ಕೇಳಲ್ಲ? ನಾವು ಮಾತ್ರ ನಿಮಗೆ ಕಾಣೋದಾ? ನಿಮಗೆ ಪ್ರಶ್ನೆ ಕೇಳ್ತಾ ಇದ್ದೀನಿ ಹೇಳಿ ಎಂದು ಜನರನ್ನು ದರ್ಶನ್ ಪ್ರಶ್ನಿಸಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror