ರಾಜ್ಯದಲ್ಲಿ ನೀರಿಲ್ಲದಿರುವಾಗ ತಮಿಳುನಾಡಿಗೆ (Tamilnadu) ಕಾವೇರಿ (Cauvery) ನೀರು ಹರಿಸಿರುವ ಬಗ್ಗೆ ರಾಜ್ಯದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದೇ ವಾರದಲ್ಲಿ ಎರಡೆರಡು ಬಾರಿ ಬಂದ್‌ಗೆ ರೂಪುರೇಷೆ ಸಿದ್ದವಾಗುತ್ತಿದೆ. ಬೆಂಗಳೂರು ಬಂದ್ (Bengaluru Bandh) ರಾಮನಗರ ಬಂದ್ (Ramanagara Bandh), ಅಖಂಡ ಕರ್ನಾಟಕ ಬಂದ್ (Karnataka Bandh)
ಕನ್ನಡ ಸಂಘಟನೆಗಳು ಸಭೆ: ನಮಗೇ ಕುಡಿಯಲು ನೀರಿಲ್ಲದಿರುವಾಗ ತಮಿಳುನಾಡಿಗೆ ಕೆಆರ್ಎಸ್ ಡ್ಯಾಂನಿಂದ ನೀರು ಹರಿಸುತ್ತಿರೋದಕ್ಕೆ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ. ಇದನ್ನ ವಿರೋಧಿಸಲೆಂದೇ ಮಂಗಳವಾರದಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಈ ನಡುವೆ ರಾಜ್ಯಸರ್ಕಾರ, ಕೇಂದ್ರ ಸರ್ಕಾರಕ್ಕೂ ಬಿಸಿ ಮುಟ್ಟಿಸಲು ಮುಂದಾಗಿರೋ ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರ ಶುಕ್ರವಾರದಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ನಾಳೆಯೇ ಕನ್ನಡ ಸಂಘಟನೆಗಳು ಸಭೆ ಸೇರಿ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬೆಂಗಳೂರು ಬಂದ್ ಜೊತೆ ಕರ್ನಾಟಕ ಬಂದ್ ಅನ್ನೂ ಮಾಡಲು ಸಂಘಟನೆಗಳು ನಿರ್ಧರಿಸಿದೆ. ನಾಳೆ ಈ ಬಗ್ಗೆ ಖಾಸಗಿ ಹೋಟೆಲ್ನಲ್ಲಿ ಸಭೆ ಸೇರಿ ಚರ್ಚಿಸಿ ಕರ್ನಾಟಕ ಬಂದ್ ಸ್ವರೂಪದ ಬಗ್ಗೆ ನಿರ್ಧರಿಸಲಿದ್ದಾರೆ. ಬೆಂಗಳೂರು ಬಂದ್‌ಗೆ ಬಿಜೆಪಿ ಕೂಡ ಬೆಂಬಲಿಸಿದೆ. ಇದಕ್ಕೆ ನಮ್ಮ ಬೆಂಬಲ ಇದೆ ಅಂತ ಬಿಎಸ್ವೈ ಹೇಳಿದ್ದಾರೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಂದ್‌ಗೆ ನಮ್ಮ ಬೆಂಬಲ ಇದೆ ಎಂದಿದ್ದಾರೆ. ಮಂಗಳವಾರ ಬಂದ್ ನಡೆಯುತ್ತೆ, ಶಾಂತಿಯುತವಾಗಿ ಬಂದ್ ಮಾಡುತ್ತೇವೆ. ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ಆಗುತ್ತೆ, ಟೌನ್ ಹಾಲ್ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೂ ಶಾಂತಿಯುತ ಪ್ರತಿಭಟನೆ ನಡೆಯುತ್ತೆ. ನಾವು ಇದನ್ನ ತೇವಲಿಗಾಗಿ ಬಂದ್ ಮಾಡ್ತಿಲ್ಲ. ಸರ್ಕಾರ ನಮ್ಮನ್ನ ನಿರ್ಲಕ್ಷ್ಯ ಮಾಡಬಾರದು, ಈ ಬಂದ್ ಪ್ರತಿಷ್ಠೆ ಬಂದ್ ಅಲ್ಲ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಬೆಂಗಳೂರು ಬಂದ್‌ಗೆ ಸಾರಿಗೆ ನೌಕರರ ಸಂಘ ಬೆಂಬಲ ಘೋಷಿಸಿದೆ.
ರಾಜಧಾನಿಯಲ್ಲಿ ಬಿಎಂಟಿಸಿ ಬಸ್ ಇಳಿಯಲ್ಲ ಅಂತ ಸಾರಿಗೆ ಸಿಬ್ಬಂದಿ ಸಂಘಟನೆ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದಾರೆ. ಆದರೆ ಸಾರಿಗೆ ನೌಕರರಿಗೆ ಬಿಎಂಟಿಸಿ ಅಲರ್ಟ್ ಆಗಿದೆ. ಮಂಗಳವಾರ ನೌಕರರ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಿದೆ. ವಾರದ ರಜೆ, ದೀರ್ಘಕಾಲದ ರಜೆ ಹೊರತುಪಡಿಸಿ ಎಲ್ಲಾ ನೌಕರರು ಕಡ್ಡಾಯವಾಗಿ ಹಾಜರಿರುವಂತೆ ಸೂಚನೆ ಕೊಟ್ಟಿದೆ. ಈ ಬಂದ್‌ಗೆ ವರ್ತಕರ ಸಂಘ, ಹೋಟೆಲ್ ಮಾಲೀಕರ ಸಂಘ, ವಕೀಲರ ಸಂಘ, ಆಟೋ ಚಾಲಕರ ಸಂಘ ಸೇರಿ ಹಲವು ಸಮುದಾಯಗಳು ಬೆಂಬಲ ನೀಡಿದೆ. ಮಂಗಳವಾರ ಬೆಳಿಗ್ಗೆ 6ರಿಂದ ಸಂಜೆ 6ವರೆಗೂ ತುರ್ತುಸೇವೆ ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಲಿದೆ.
ಕಾವೇರಿ ಹೋರಾಟದ ಬಗ್ಗೆ ನಟ ದರ್ಶನ್ ಗರಂ : ಇದೇ ವೇಳೆ ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್#Darshan ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ ಎಂಬ ಕೂಗಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದರ್ಶನ್, ಸುದೀಪ್, ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ ಎಂದು ಪ್ರಶ್ನಿಸಿದ್ದಾರೆ. ಮೊನ್ನೆ ಬಂದ ತಮಿಳು ಚಿತ್ರದಲ್ಲಿ ಕರ್ನಾಟಕದಲ್ಲೇ ಕೋಟಿ ಕೋಟಿ ಮಾಡಿದವನು ನಿಮಗೆ ಕಾಣ್ತಿಲ್ವ? ಕರ್ನಾಟಕದಲ್ಲೇ ಒಬ್ಬ ವಿತರಕ ತಮಿಳು ಚಿತ್ರದಿಂದ ಕರ್ನಾಟಕದದಲ್ಲೇ 36 ಕೋಟಿ ರೂ. ಮಾಡಿದ. 6 ಕೋಟಿ ಹಾಕಿ 36 ಕೋಟಿ ಮಾಡಿದ. ಅವನಿಗೆ ಯಾಕೆ ನೀವು ಕೇಳಲ್ಲ? ನಾವು ಮಾತ್ರ ನಿಮಗೆ ಕಾಣೋದಾ? ನಿಮಗೆ ಪ್ರಶ್ನೆ ಕೇಳ್ತಾ ಇದ್ದೀನಿ ಹೇಳಿ ಎಂದು ಜನರನ್ನು ದರ್ಶನ್ ಪ್ರಶ್ನಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…
ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…