ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೆಂಗಳೂರು ಹಾಲು ಒಕ್ಕೂಟದ ಶಿಬಿರ ಕಚೇರಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಲು ಉತ್ಪಾದಕರು ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಹಾಲು ಉತ್ಪಾದನೆಯಲ್ಲಿ ಜಿಲ್ಲೆಯ ಹೆಸರು ಮುಂಚೂಣಿಯಲ್ಲಿ ಉಳಿಸಬೇಕಿದೆ ಎಂದರು. ಜಿಲ್ಲೆಯಲ್ಲಿ ರೇಷ್ಮೆ ಬೆಳೆ ಬೆಳೆಯುತ್ತಿರುವವರ ಸಂಖ್ಯೆ ಕಡಿಮೆ ಇದೆ. ರೇಷ್ಮೆ ಬೆಳೆ ಬೆಳೆಯಲು ಸರ್ಕಾರ ಎಲ್ಲಾ ಸವಲತ್ತನ್ನು ರೈತರಿಗೆ ನೀಡುತ್ತಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel