Advertisement
ಸುದ್ದಿಗಳು

ಕೈಗಾರಿಕಾ ತ್ಯಾಜ್ಯಗಳಿಂದ ಕೆರೆಗಳು ಕಲುಷಿತ | ಲೋಕಾಯುಕ್ತ ಕಾಯ್ದೆ ಅಡಿ ಸ್ವಯಂ ಪ್ರೇರಿತ ದೂರು ದಾಖಲು

Share

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೈಗಾರಿಕಾ ತ್ಯಾಜ್ಯಗಳಿಂದಾಗಿ ಕೆಲವು ಗ್ರಾಮಗಳ ಕೆರೆಗಳು ಕಲುಷಿತಗೊಂಡಿರುವ ಕುರಿತು ಬಂದಿರುವ ದೂರುಗಳು ಮತ್ತು ವರದಿಗಳ ಆಧಾರದಲ್ಲಿ ಲೋಕಾಯುಕ್ತ ಕಾಯ್ದೆ ಅಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕೈಗಾರಿಕಾ ತ್ಯಾಜ್ಯ ನೀರನ್ನು ಕೆರೆಗಳಿಗೆ ಹಾಗೂ ಇತರ ಜಲ ಮೂಲಗಳಿಗೆ ಹರಿಸುತ್ತಿರುವವರ ವಿರುದ್ಧ ಕೈಗೊಂಡಿರುವ ಕಾನೂನು ಕ್ರಮಗಳ ಬಗ್ಗೆ ಪೂರಕ ದಾಖಲೆಗಳೊಂದಿಗೆ ಮಾರ್ಚ್ 9 ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಯಾವುದೇ ಕಾರಣಕ್ಕೂ ಕೈಗಾರಿಕಾ ತ್ಯಾಜ್ಯಗಳು ಕೆರೆಗಳು, ನದಿಗಳು ಮತ್ತು ಭೂಗರ್ಭ ಜಲ ಮೂಲಗಳಿಗೆ ಸೇರದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅವರು ಎಚ್ಚರಿಕೆ ನೀಡಿದರು. ಈ ವಿಚಾರದಲ್ಲಿ ನಿರ್ಲಕ್ಷ್ಯ ಅಥವಾ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೈಗಾರಿಕಾ ತ್ಯಾಜ್ಯದಿಂದ ಜಲ ಮೂಲಗಳು ಕಲುಷಿತಗೊಳ್ಳುವುದು ಪರಿಸರ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ತೀವ್ರ ಅಪಾಯವನ್ನುಂಟುಮಾಡುತ್ತದೆ. ಈ ಹಿನ್ನೆಲೆ ಲೋಕಾಯುಕ್ತರ ಸ್ವಯಂ ಪ್ರೇರಿತ ಕ್ರಮವು ಪರಿಸರ ರಕ್ಷಣೆಯ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

12 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

17 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

17 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

21 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago