Advertisement
ಸುದ್ದಿಗಳು

ಬೆಂಗಳೂರಿನ ಪ್ರತೀ ವ್ಯಕ್ತಿಯ ಆದಾಯ 6,21,000 | ದ.ಕ ಜಿಲ್ಲೆಯೂ ಕಡಿಮೆ ಇಲ್ಲ…!

Share

ರಾಜ್ಯದ ಎಲ್ಲ ಜಿಲ್ಲೆಗಳ ಆರ್ಥಿಕ ಸಮೀಕ್ಷೆಯನ್ನು ನಡೆಸಿ ತಲಾ ಆದಾಯವನ್ನೂ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಇಡೀ ದೇಶದಲ್ಲೇ ಆರ್ಥಿಕವಾಗಿ ಮುಂಚೂಣಿಯಲ್ಲಿರುವ ರಾಜ್ಯ, ಕರ್ನಾಟಕದಲ್ಲಿ ಯಾವುದೇ ಯೋಜನೆ ಘೋಷಿಸಿದರೂ ಇಡೀ ದೇಶ ಒಮ್ಮೆ ತಿರುಗಿ ನೋಡುತ್ತೆ. ಕರ್ನಾಟಕದಲ್ಲೂ ಬೆಂಗಳೂರು ನಗರ ದೇಶದ ಇತರ ನಗರಗಳಿಗಿಂತ ವೇಗವಾಗಿ ಬೆಳವಣಿಗೆ ಕಾಣುತ್ತಿದೆ. 

ಅಂದ ಹಾಗೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಇಡೀ ರಾಜ್ಯದಲ್ಲೇ 2ನೇ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಾ ಆದಾಯ 3,70,834 ರೂ. ಆಗಿದೆ.  ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿ ಉಡುಪಿಯಿದೆ. ಚಿಕ್ಕಮಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು 4 ಮತ್ತು 5ನೇ ಸ್ಥಾನದಲ್ಲಿವೆ. ಇನ್ನು ತಲಾ ಆದಾಯದಲ್ಲಿ ಕೊನೆಯ ಐದನೇ ಸ್ಥಾನದಲ್ಲಿ ಯಾದಗಿರಿ, ಕೊಪ್ಪಳ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿವೆ.

ಕರ್ನಾಟಕ ಸರ್ಕಾರದ 2022-23 ರ ಕರ್ನಾಟಕದ ಆರ್ಥಿಕ ಸಮೀಕ್ಷೆಯ ಪ್ರಕಾರ ಕರ್ನಾಟಕದ ತಲಾ ಆದಾಯ 3,01,673 ಲಕ್ಷ. ಶಿಕ್ಷಣ, ಕೃಷಿ, ಕೈಗಾರಿಕೆಗಳು, ಸೇವೆಗಳು ಮತ್ತು ಆರೋಗ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳ ಆಧಾರದ ಮೇಲೆ ಈ ಆರ್ಥಿಕ ಸಮೀಕ್ಷೆ ಸಿದ್ಧಪಡಿಸಲಾಗಿದೆ.

ಅಂದ ಹಾಗೆ ಈ ಆರ್ಥಿಕ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ತಲಾ ಆದಾಯವನ್ನೂ ಸಹ ಪ್ರಕಟಿಸಲಾಗಿದೆ. ಈ ಪೈಕಿ ರಾಜ್ಯ ರಾಜಧಾನಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ.

ಬೆಂಗಳೂರು ನಗರ ಜಿಲ್ಲೆಯ ತಲಾ ಆದಾಯ 6,21,131 ಲಕ್ಷವಾಗಿದೆ. ಅಂದರೆ ಬೆಂಗಳೂರು ನಗರ ನಿವಾಸಿಗಳ ತಲಾ ಆದಾಯ 6,21,131 ಲಕ್ಷವಾಗಿದೆ. ಬೆಂಗಳೂರನ್ನು ಬಿಟ್ಟು ರಾಜ್ಯದ ಇತರ ಯಾವ ಜಿಲ್ಲೆಯ ಆದಾಯವೂ 4 ಲಕ್ಷ ದಾಟಿಲ್ಲ.

ಇಡೀ ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯ ತಲಾ ಆದಾಯ ಅತೀ ಕಡಿಮೆಯಿದೆ. ಕಲ್ಯಾಣ ಕರ್ನಾಟಕ ಕೇಂದ್ರವಾದ ಕಲಬುರಗಿಯ ತಲಾ ಆದಾಯ 1,24,998 ರೂ. ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago