ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.
ಶಿಗ್ಗಾಂವಿ, ತರೀಕೆರೆ, ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಬಾಳೆಹೊನ್ನೂರು, ಸುತ್ತೂರು, ಆನವಟ್ಟಿ, ಶಿವಮೊಗ್ಗ, ಮಲವಳ್ಳಿ, ಲೋಕಾಪುರ, ಸಂಕೇಶ್ವರ, ಹಾವೇರಿ, ಗದಗ, ಮುದಗಲ್, ಧಾರವಾಡ, ಕೆಂಭಾವಿ, ಚನ್ನಗಿರಿ, ರಾಮನಗರ, ಅಜ್ಜಂಪುರ, ಮದ್ದೂರು, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಲಾಗಿದೆ. ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…
ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ…
ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490