Advertisement
MIRROR FOCUS

ಪದೇ ಪದೇ ರೈತರನ್ನು ಅವಮಾನ | ನಮ್ಮ ಮೆಟ್ರೋ ಬಳಿಕ ಮಾಲ್‌ನಲ್ಲಿ ಅನ್ನದಾತನಿಗೆ ಅವಮಾನ | ಪಂಚೆ ಧರಿಸಿದ್ದಕ್ಕೆ ಮಾಲ್‌ ಒಳಗೆ ಪ್ರವೇಶ ಇಲ್ಲ..!

Share

ಜಗತ್ತು ಆಧುನಿಕರಣಗೊಳ್ಳುತ್ತಿದ್ದಂತೆ(modernization) ಹಳ್ಳಿ ಜನ(Village people), ರೈತರು(Farmer) ಕಡೆಗಣನೆಗೆ ಒಳಗಾಗುತ್ತಿದ್ದಾರೆ.  ಅನ್ನ ನೀಡುವ ರೈತನನ್ನು ಪೇಟೆ ಮಂದಿ ನಿಕೃಷ್ಟವಾಗಿ ಕಾಣುವುದು ಮುಂದುವರೆಯುತ್ತಲೇ ಇದೆ. ಅಂದು ನಮ್ಮ ಮೆಟ್ರೋ (Namma Metro)ದಲ್ಲಿ ರೈತನಿಗೆ ರೈಲು ಏರಕು ಬಿಡದೆ ಅವಮಾನ ಮಾಡಲಾಗಿತ್ತು. ಇದೀಗ ಬೆಂಗಳೂರಿನ(Bengaluru) ಖಾಸಗಿ ಮಾಲ್‌ನಲ್ಲಿ (Private Mall) ರೈತನಿಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರೈತರೊಬ್ಬರು  ಪಂಚೆ ಧರಿಸಿ ಬಂದಿದ್ದಕ್ಕೆ ಒಳಗೆ ಬಿಡದೇ ಅವಮಾನ ಮಾಡಿರುವ ಘಟನೆ ಬೆಂಗಳೂರು ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್‌ನಲ್ಲಿ (GT Mall) ನಡೆದಿದೆ. ಮಾಲ್ ಆಡಳಿತ ಮಂಡಳಿಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಏನಿದು ಘಟನೆ? : ಹಾವೇರಿ ಮೂಲದ ನಾಗರಾಜ್‌ ಎಂಬುವವರು ತಮ್ಮ ತಂದೆ – ತಾಯಿಯನ್ನು ಜಿ.ಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದರು. ತಂದೆ-ತಾಯಿಗೆ ಸಿನಿಮಾ ತೋರಿಸಲು ಮಾಲ್‌ಗೆ ಕರೆದುಕೊಂಡು ಬಂದಿದ್ದರು. ಆದ್ರೆ ತಮ್ಮ ತಂದೆ ಪಂಚೆ ಧರಿಸಿದ್ದಾರೆ ಅನ್ನೋ ಕಾರಣಕ್ಕೆ ಮಾಲ್‌ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ. ಪಂಚೆ ಧರಿಸಿದರಿಗೆ ಮಾಲ್‌ ಒಳಗೆ ಬಿಡುವುದಿಲ್ಲ, ನಮ್ಮ ಮಾಲ್‌ನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಸಿಬ್ಬಂದಿ ಹೇಳಿರುವುದಾಗಿ ನಾಗರಾಜ್‌ ಆರೋಪಿಸಿದ್ದಾರೆ. ನಾಗರಾಜ್‌ ಅವರ ತಂದೆ ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ರೈತರು. ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮಾಲ್‌ ಒಳಗೂ ಬಿಡದೇ, ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿ ಅವಮಾನ ಮಾಡಿದ್ದಾರೆ ಎಂದು ಪುತ್ರ ನಾಗರಾಜ್‌ ದೂರಿದ್ದಾರೆ.

ರೈತನಿಗೆ ಮಾಲ್‌ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ ವರ್ತನೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಯಿತು. ಅಲ್ಲೇ ಇದ್ದ ಕೆಲ ಯೂಟ್ಯೂಬರ್ಸ್‌ ಘಟನೆಯನ್ನ ವೀಡಿಯೋ ಮಾಡಲು ಶುರು ಮಾಡಿದರು. ಬಳಿಕ ಮಾಲ್‌ನ ಆಡಳಿತ ಮಂಡಳಿ ಜೊತೆ ಮಾತನಾಡಿ, ರೈತನಿಗೆ ಮಾಲ್ ಒಳಗೆ ಪ್ರವೇಶ ಕೊಡಿಸುವಂತೆ ಮಾಡಿದ್ದಾರೆ. ಅರ್ಧ ಗಂಟೆ ಬಳಿಕ ಸಿಬ್ಬಂದಿ ರೈತನಿಗೆ ಮಾಲ್‌ ಒಳಗೆ ಪ್ರವೇಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಪುತ್ರ ನಾಗರಾಜ್‌ ತಿಳಿಸಿದ್ದಾರೆ. ಕಳೆದ ಫೆಬ್ರವರಿ 26ರಂದು ಬೆಂಗಳೂರಿನ ರಾಜಾಜಿನಗರ ನಮ್ಮ ಮೆಟ್ರೋ ನಿಲ್ದಾಣದಲ್ಲಿ ರೈತನಿಗೆ ಅವಮಾನ ಮಾಡಿದ್ದ ಘಟನೆ ನಡೆದಿತ್ತು. ಇದಕ್ಕೆ ಮೆಟ್ರೋ ಆಡಳಿತ ಮಂಡಳಿ ಕ್ಷಮೆಯಾಚಿಸಿತ್ತು.ಈಗಲೂ ಘಟನೆಯ ಬಗ್ಗೆ ಮಾಲ್‌ ಮುಖ್ಯಸ್ಥರು ಕ್ಷಮೆಯಾಚಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

10 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

11 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

11 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

18 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

23 hours ago