Advertisement
MIRROR FOCUS

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

Share

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾರೆ.

ರಾಜೇಂದ್ರ ಮಲ್ಲಪ್ಪ ಎಂಬ ಕೃಷಿಕ ಈಗ ಗಮನ ಸೆಳೆದಿರುವ ರೈತ. ಹೊಸ ಬಗೆಯ ಬೇಸಾಯ ನಡೆಸುವ ಮೂಲಕ ಕಬ್ಬು, ಹುರುಳಿ, ಕಡಲೆ ಬೆಳೆಯ ಕೃಷಿಯಲ್ಲಿ ತೊಡಗಿರುವ ರೈತ. ರಾಸಾಯನಿಕ ಹಾಗೂ ಕೊಟ್ಟಿಗೆ ಗೊಬ್ಬರ ಬಳಸದೆ ಕಟಾವು ಮಾಡಿದ ಬೆಳೆಯಲ್ಲಿ ಉಳಿಯುವ ಕೃಷಿ ಕೂಳೆಯನ್ನು ಉಳುಮೆ ಮಾಡುವ ಮೂಲಕ ಮಣ್ಣಿನ ಫಲವತ್ತತೆಯನ್ನು ಸಂರಕ್ಷಿಸಿದ್ದಾರೆ.

ಈ ಮೊದಲು ರಾಸಾಯನಿಕ ಹಾಗೂ ಗೋಬರ್ ಗ್ಯಾಸ್  ತ್ಯಾಜ್ಯವನ್ನು  ಸಹ ಬಳಸುತ್ತಿದ್ದೆವು. ಆದರೆ ಈಗ ಯಾವುದೇ ರಾಸಾನಿಕ ಬಳಸದೆ ಉತ್ತಮ ಫಸಲು ತೆಗೆಯುತ್ತಿರುವುದಾಗಿ ರೈತ ರಾಜೇಂದ್ರ ಮಲ್ಲಪ್ಪ ಹೇಳುತ್ತಾರೆ. ಅಂದರೆ ಈ ಮಣ್ಣಿನಲ್ಲಿ ಸಾಕಷ್ಟು ಪೋಷಕಾಂಶಗಳು ಇರುತ್ತದೆ. ಸಹಜವಾಗಿಯೇ ಬೆಳೆಯುವ ಗಿಡಗಳನ್ನು ಮತ್ತೆ ಭೂಮಿಗೆ ಲಭ್ಯವಾಗುವ ಹಾಗೆ ಮಾಡಬೇಕು. ಈ ಕಾರಣದಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ ಎನ್ನುತ್ತಾರೆ ಅವರು.

ಯಾವುದೇ ರಾಸಾಯನಿಕಗಳನ್ನು ಬಳಸದೆ  ವಿಶೇಷ  ಕೃಷಿ ಪದ್ಧತಿಯಿಂದ  ಉತ್ತಮ ಇಳುವರಿ ಪಡೆಯಲಾಗಿದೆ ಎನ್ನುವುದು ನಾವು ಪರೀಕ್ಷಿಸಿದಾಗ ತಿಳಿಯುತ್ತದೆ ಎನ್ನುತ್ತಾರೆ ರೈತ  ರೈತ ಸಂಜಯ್. ಅಂದರೆ ಭೂಮಿಗೆ ರಾಸಾಯನಿಕವೇ ಯಥೇಚ್ಛವಾಗಿ ಬೇಕಾಗಿಲ್ಲ ಎನ್ನುವುದು ಈ ಮೂಲಕ ಅರಿವಾಗುತ್ತದೆ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

14 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago