ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಇಂದಿನಿಂದ ಮೂರು ದಿನಗಳವರೆಗೆ ನೀರು ಹರಿಸಲಾಗುತ್ತಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.ಪ್ರತಿ ದಿನ 8 ಸಾವಿರ ಕ್ಯುಸೆಕ್ನಂತೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ನದಿಗೆ ಇಳಿಯಬಾರದು ಎಂದು ಸೂಚನೆ ನೀಡಿದ್ದಾರೆ. ಈ ಅವಧಿಯಲ್ಲಿ ವಿದ್ಯುತ್ ಹಾಗೂ ಡೀಸೆಲ್ ಪಂಪ್ಸೆಟ್ ಮತ್ತು ಟ್ಯಾಂಕರ್ಗಳ ಮೂಲಕ ಅನಧಿಕೃತವಾಗಿ ನದಿಯಿಂದ ನೀರು ಎತ್ತುವುದು ನಿಷೇಧಿಸಲಾಗಿದೆ. ನದಿ ಪಾತ್ರದಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel