ಇದೇ ವರ್ಷದಿಂದಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ವಿಧಾನ ಪರಿಷತ್ ಸಭೆಯಲ್ಲಿ ಈ ವಿಚಾರದ ಬಗ್ಗೆ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ.
ಭಗವದ್ಗೀತೆ ಬೋಧನೆ ಮಾಡಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ..?
ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನಿಸಿದರು.
ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel