ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸುವ ವೇಳೆ ಶಾಸಕ ಎಸ್ ಅಂಗಾರ ಗೈರಾಗಿದ್ದಾರೆ. ಈ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಈ ಸಂದರ್ಭ ಸುಳ್ಯದ ಬಿಜೆಪಿ ಪ್ರಮುಖರು ಇದ್ದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆಯಾಗಿದ್ದು ಅಂಗಾರ ಬದಲಾಗಿ ಭಾಗೀರಥಿ ಮುರುಳ್ಯ ಹೆಸರು ಘೋಷಣೆಯಾಗಿದೆ. ತಕ್ಷಣವೇ ಶಾಸಕ, ಸಚಿವ ಅಂಗಾರ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದರು, ಪಕ್ಷದ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಚ್ಚರಿ ಎಂದರೆ ಸುಮಾರು 30 ವರ್ಷಗಳ ಕಾಲ ಶಾಸಕರಾಗಿದ್ದ ಅಂಗಾರ ಅವರ ಬದಲಾಯಿಸಿದಾಗ ಅವರಿಗೆ ಅಸಮಾಧಾನವಾಗುವುದು ಸಹಜವೇ. ಆದರೆ ಅದೇ ಪಕ್ಷದ ಪ್ರಮುಖರು, ಅಂಗಾರ ಅವರ ಜೊತೆಗೇ ಇದ್ದವರು ಮೌನವಹಿಸಿದ್ದರು. ಒಬ್ಬರು ಮಾತ್ರಾ ಅಸಮಾಧಾನ ವ್ಯಕ್ತಪಡಿಸಿ, ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಪಕ್ಷದ ಹುದ್ದೆಗೆ ರಾಜೀನಾಮೆ ಘೋಷಿಸಿದರು. ಪಕ್ಷದ ಉಳಿದವರು ಅಂಗಾರ ಅವರ ಬಳಿ ಸುಳಿಯಲಿಲ್ಲ ಎನ್ನುವುದು ಅಂಗಾರ ಅವರ ಆಪ್ತ ವಲಯ ಹೇಳಿಕೊಂಡಿದೆ.
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಕ್ಕೆ ಸುಬ್ರಹ್ಮಣ್ಯ ಭೇಟಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಅವಕಾಶವನ್ನು ಬಿಜೆಪಿ ಅಭ್ಯರ್ಥಿ ಭಾಗೀರಥಿ ಬಳಸಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಪರಿಚಯಿಸಿಕೊಂಡು, ಸ್ವಾಗತಿಸಿ ಆಶೀರ್ವಾದ ಪಡೆದರು. ಈ ಸಂದರ್ಭ ಸುಳ್ಯದ ಬಿಜೆಪಿಯ ಎಲ್ಲಾ ಪ್ರಮುಖರೂ ಭಾಗಿಯಾಗಿದ್ದರು. ಈ ಮೂಲಕ ಅಂಗಾರ ಅವರಿಗೆ ಟಿಕೆಟ್ ತಪ್ಪಿದರೂ ಪಕ್ಷದ ನಿಲುವು ಸರಿಯಾಗಿದೆ ಎನ್ನುವ ಸಂದೇಶವನ್ನು ರವಾನಿಸಿದರು.
ಈ ಮಧ್ಯೆ ಬಿಜೆಪಿ ಪಕ್ಷವು ಅಭ್ಯರ್ಥಿ ಬದಲಾವಣೆ ಮಾಡಿರುವುದನ್ನು ಬಿಜೆಪಿ ಮುಖಂಡ ಎಸ್ ಎನ್ ಮನ್ಮಥ ಸ್ವಾಗತಿಸಿದ್ದಾರೆ. ಈ ಮೂಲಕ ಬಿಜೆಪಿ ಸ್ವಾಭಿಮಾನಿ ಬಳಗ ಎನ್ನುವ ಬಿಜೆಪಿ ಗುಂಪು ಕೂಡಾ ಅಭ್ಯರ್ಥಿ ಬದಲಾವಣೆಯನ್ನು ಸ್ವಾಗತಿಸಿದೆ ಎನ್ನುವುದು ಪರೋಕ್ಷವಾದ ಸೂಚನೆಯನ್ನೂ ನೀಡಿದೆ.ಇದೆಲ್ಲಾ ಬೆಳವಣಿಗೆಯು ಸುಳ್ಯ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಯ ಬಳಿಕ ನಡೆದಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…