ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಈ ಹಿಂದೆ ಬಡವರಿಗಾಗಿ ಅನೇಕ ಯೋಜನೆಗಳನ್ನು ಹಿಂದಿನ ಸರ್ಕಾರಗಗಳು ಜಾರಿಗೆ ತಂದಿದ್ದವು. ಈಗ ಅವೆಲ್ಲವನ್ನು ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ #GruhaJyothi ಜೊತೆಗೆ ವಿಲೀನಗೊಳಿಸಲು ಮುಂದಾಗಿದೆ.
ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಫಲಾನುಭವಿಗಳು ಗೃಹಜ್ಯೋತಿ ಗೆ ನೋಂದಾಯಿಸಿಕೊಳ್ಳಲು ಎಸ್ಕಾಂ #ESCOM ಗಳು ಮನವಿ ಮಾಡಿಕೊಂಡಿವೆ. ಭಾಗ್ಯಜ್ಯೋತಿ ಕುಟೀರ ಜ್ಯೋತಿಯಲ್ಲಿ 40 ಯೂನಿಟ್ ಹಾಗೂ ಅಮೃತ ಜ್ಯೋತಿಯಲ್ಲಿ ಎಸ್‌ಟಿ, ಎಸ್‌ಸಿ ಸಮುದಾಯಕ್ಕೆ 75 ಯೂನಿಟ್ ಉಚಿತ ಸ್ಕೀಮ್ ಇತ್ತು. ಈಗ ಈ ಎಲ್ಲಾ ಯೋಜನೆಗಳು ಗೃಹಜ್ಯೋತಿಯ ಜೊತೆಗೆ ವಿಲೀನಗೊಂಡಿದೆ.
ಬೇರೆ ಸ್ಕೀಮ್‌ಗಳ ಪ್ರಯೋಜನವನ್ನು ಪಡೆಯುತ್ತಿರುವ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಮತ್ತೊಮ್ಮೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳುವಂತೆ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ ಜೊತೆಗೆ ವಿಲೀನವಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel