ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 25ನೇ ವರ್ಷದ ಭಜನಾ ಕಮ್ಮಟದ ಮೂರನೇ ದಿನದ ಕಾರ್ಯಕ್ರಮಕ್ಕೆ ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಇವರು ಭೇಟಿ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಭಜನಾ ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಭಜನೆಯು ವಿಭಜಿಸುವುದಿಲ್ಲ. ಬದಲಾಗಿ ಒಗ್ಗೂಡಿಸುತ್ತದೆ. ‘ದೇವರನ್ನು ಭೇಟಿ ಮಾಡಲು ಸುಲಭದ ಮಾರ್ಗ ಭಜನೆಯಾಗಿದೆ’ ಯಾರು ಸಮಾಜವನ್ನು ವಿಭಜಿಸುವ ಕಾರ್ಯಕ್ಕೆ ಯಾರು ಭಾಗಿಯಾಗುತ್ತಾರೋ ಅದು ಅಧರ್ಮದ ಅಪ್ರಕ್ರಿಯೆ. ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಗುತ್ತಿದೆ. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಧಾರ್ಮಿಕ ಸಂಘಟನೆ, ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳ ಮೂಲಕ ಎಲ್ಲರ ಅಭಿವೃದ್ಢಿಗೆ ಕೈ ಜೋಡಿಸುತ್ತಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದ ರಜತ ಮಹೋತ್ಸವದ ಮೂರನೇ ದಿನ ಡಾ|.ಐ ಶಶಿಕಾಂತ್ ಜೈನ್ ಯೋಗ ನಿರ್ದೇಶಕರು ಶಾಂತಿವನ ಟ್ರಸ್ಟ್ ಇವರು ಮುಂಜಾನೆ ಶಿಬಿರಾರ್ಥಿಗಳಿಗೆ ಯೋಗ ಅಭ್ಯಾಸವನ್ನು ಮಾಡಿಸಿದರು.
ಇಂದಿನ ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯದ ಪ್ರತಿಷ್ಠಿತ ಭಜನಾ ಕಲಾವಿದರಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಅವರು ಭಜನಾ ತರಬೇತಿಯನ್ನು ನಡೆಸಿಕೊಟ್ಟರು.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…