ಧರ್ಮಸ್ಥಳದಲ್ಲಿ 25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ | ಶ್ರದ್ಧಾ-ಭಕ್ತಿಯ ಭಜನೆ ಮೂಲಕ ದೇವರ ಸಾಕ್ಷಾತ್ಕಾರ- ಡಾ. ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಕ್ತಿಗೆ ಮೂಲವೇ ಭಜನೆ. ನಮ್ಮ ದೇಶದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯಲ್ಲಿ ಭಜನೆ ಹಾಸುಹೊಕ್ಕಾಗಿದ್ದು ಶ್ರದ್ಧಾ-ಭಕ್ತಿಯ ಭಜನೆ ಮೂಲಕ ದೇವರ ಸಾಕ್ಷಾತ್ಕಾರವಾಗುತ್ತದೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಡಾ. ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.

Advertisement

ಅವರು ಬುಧವಾರ ಧರ್ಮಸ್ಥಳದಲ್ಲಿ ಒಂದು ವಾರ ಕಾಲ ನಡೆದ ಭಜನಾ ತರಬೇತಿ ಕಮ್ಮಟದ ಸಮರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಮಹಾರಾಷ್ಟ್ರದಲ್ಲಿ ಸಂತ ತುಕಾರಾಮ ಮೊದಲಾದ ಸಂತರು ಭಜನಾ ಕ್ಷೇತ್ರದಲ್ಲಿ ಕ್ರಾಂತಿಯನ್ನೆ ಮಾಡಿದ್ದಾರೆ. ಭೌತಿಕ ಸುಖ-ಭೋಗಕ್ಕಿಂತ ಆಧ್ಯಾತ್ಮಿಕ ಬದುಕೇ ಶ್ರೇಷ್ಠವಾಗಿದ್ದು ಭಜನೆ ಮೂಲಕ ಸುಲಭದಲ್ಲಿ ಭಗವಂತನ ಅನುಗ್ರಹಕ್ಕೆ ಪಾತ್ರರಾಗಬಹುದು. ಭಜನೆ ಮೂಲಕ ಧರ್ಮಜಾಗೃತಿಯಾಗಿ ನೈತಿಕಮೌಲ್ಯಗಳು ಉದ್ದೀಪನಗೊಂಡು ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಸ್ವಾಮೀಜಿ ಹೇಳಿದರು.

ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಇಳೈಯರಾಜ ಶುಭಾಶಂಸನೆ ಮಾಡಿದರು.

ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮಾತನಾಡಿ, ಭಜನೆಯಿಂದ ಸಾತ್ವಿಕ ಸಮಾಜ ನಿರ್ಮಾಣವಾಗುತ್ತದೆ. ಕಲಿಯುಗದಲ್ಲಿ ಭಜನೆ ಮಾಡುವುದರಿಂದ ಭಗವಂತನೊಂದಿಗೆ ನೇರವಾಗಿ ಅನುಸಂಧಾನ ಸಾಧ್ಯವಾಗುತ್ತದೆ ಎಂದರು.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಮಾತನಾಡಿ ಭಜನಾ ತರಬೇತಿ ಮೂಲಕ ಹೆಗ್ಗಡೆಯವರು ಆರೋಗ್ಯಪೂರ್ಣ ಸಮಾಜ ನಿರ್ಮಾಣದ ರೂವಾರಿಯಾಗಿದ್ದಾರೆ. ಶಿಕ್ಷಣ, ಮಹಿಳಾ ಸಬಲೀಕರಣ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಮೂಲಕ ಹೆಗ್ಗಡೆಯವರು ಅನುಪಮ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನಾ ತರಬೇತಿ ಪಡೆದವರು ನಾಯಕತ್ವ ಗುಣ ಬೆಳೆಸಿಕೊಂಡು ಆಯಾ ಊರಿನ ಪ್ರಗತಿಯ ರೂವಾರಿಗಳಾಗಬೇಕು. ವರ್ತನೆಯಲ್ಲಿ ಪರಿವರ್ತನೆಯಾಗಬೇಕು. ಪ್ರಜ್ಞಾವಂತ ನಾಗರಿಕರಾಗಿ, ಪ್ರಗತಿಶೀಲ ಚಿಂತನೆಯೊಂದಿಗೆ ಸಮಾಜದಲ್ಲಿ ಸುಖ-ಶಾಂತಿ, ಸಾಮರಸ್ಯ, ಸೌಹಾರ್ದತೆ ನೆಲೆಸುವಂತೆ ಮಾಡಬೇಕು. ದುಶ್ಚಟಮುಕ್ತ ಸಮಾಜ ರೂಪಿಸಿ, ಮಾನವೀಯತೆಯೊಂದಿಗೆ ಎಲ್ಲರ ಮನೆ ಮತ್ತು ಮನ ಬೆಳಗಲಿ ಎಂದು ಹೆಗ್ಗಡೆಯವರು ಹಾರೈಸಿದರು.

ಪುಲಿಯಾರು ಸಿದ್ಧಪ್ಪ ಅಯ್ಯಪ್ಪ ಸ್ವಾಮೀಜಿ ಮತ್ತು ಮಾಣಿಲದ ಮೋಹನದಾಸ ಸ್ವಾಮೀಜಿ ಇದ್ದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಉಪಸ್ಥಿತರಿದ್ದರು.

ಧರ್ಮಸ್ಥಳದ ವಿದುಷಿ ಕುಮಾರಿ ಚೈತ್ರಾ ಮತ್ತು ಬಳಗದವರ ನೃತ್ಯಭಜನೆ ಆಕರ್ಷಕವಾಗಿ ಮೂಡಿ ಬಂತು. ಭಜನಾ ತರಬೇತಿ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಶ್ರೀನಿವಾಸರಾವ್ ಧರ್ಮಸ್ಥಳ ವಂದಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

2 hours ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

2 hours ago

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

1 day ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

1 day ago