ಧರ್ಮಸ್ಥಳದಲ್ಲಿ 25 ನೆ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅಕ್ಟೋಬರ್ 4 ರ ವರೆಗೆ ನಡೆಯಲಿದೆ.
ನಾಳೆ ಗುರುವಾರ ಪೂರ್ವಾಹ್ನ 11 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು.ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.
ಕಾರ್ಯಾಗಾರದಲ್ಲಿ ಖ್ಯಾತ ಗಾಯಕರಾದ ಬೆಂಗಳೂರಿನ ಶಂಕರ್ ಶ್ಯಾನ್‌ಬಾಗ್ ಮತ್ತು ಎಂ.ಎಸ್. ಗಿರಿಧರ್, ಕಾಸರಗೋಡಿನ ರಾಮಕೃಷ್ಣ ಕಾಟುಕುಕ್ಕೆ, ಮಣಿಪಾಲದ ಉಷಾ ಹೆಬ್ಬಾರ್, ಉಡುಪಿಯ ಸಂಗೀತಾ ಬಾಲಚಂದ್ರ, ಧರ್ಮಸ್ಥಳದ ಮನೋರಮಾ ತೋಳ್ಪಾಡಿತ್ತಾಯ, ಸುನಿಲ್ ಶೆಟ್ಟಿ, ಸೌಮ್ಯ ಸುಭಾಷ್, ಮಂಗಲದಾಸ ಗುಲ್ವಾಡಿ, ಎಂ. ನಾಗೇಶ್ ಶೆಣೈ, ರವಿರಾಜ್ ಉಜಿರೆ, ರಮೇಶ್ ಕಲ್ಮಾಡಿ, ಶಂಕರ್ ಉಡುಪಿ, ಕುಮಾರಿ ಚೈತ್ರಾ ಮತ್ತು ಕುಮಾರಿ ಮಾಧವಿ, ಎಂ.ಎಸ್. ಹಾಗೂ ಡಾ. ಶಶಿಕಾಂತ್ ಜೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…