ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

July 8, 2025
8:15 PM

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ ನಡೆಯುವ ಭಾರತ್ ಬಂದ್‌ನಲ್ಲಿ ಸುಮಾರು 25 ಕೋಟಿಗೂ ಅಧಿಕ ಕಾರ್ಮಿಕರು ಭಾಗವಹಿಸುವ ಸಾಧ್ಯತೆಗಳಿವೆ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಮತ್ತು ಕಾರ್ಪೋರೇಟ್ ಪರವಾದ ನೀತಿಯನ್ನು ಖಂಡಿಸಿ ಒಟ್ಟು 10 ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ್ ಬಂದ್‌ಗೆ ಕರೆ ನೀಡಿವೆ. ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗ ಹೆಚ್ಚುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳು ಏರುತ್ತಿವೆ, ವೇತನ ಕುಸಿಯುತ್ತಿದೆ ಮತ್ತು ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ನಾಗರಿಕ ಸೌಲಭ್ಯಗಳ ಮೇಲಿನ ಸಾಮಾಜಿಕ ವಲಯದ ವೆಚ್ಚವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆಗಳ ವೇದಿಕೆ ಆರೋಪಿಸಿದೆ. ಭಾರತ್‌ ಬಂದ್‌ ಕಾರಣದಿಂದ ಬ್ಯಾಂಕಿಂಗ್, ವಿಮೆ, ಅಂಚೆ ಕಚೇರಿ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಸಿಟಿಜನ್‌ ನ್ಯೂಸ್‌ ಪುತ್ತೂರು ನಲ್ಲಿದೆ.. ಲಿಂಕ್‌ ಇಲ್ಲಿದೆ… https://www.citizennewsputtur.com/2025/07/bharat-bandh-2025-strike-july-9-what-to.html#

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror