ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ ನಡೆಯುವ ಭಾರತ್ ಬಂದ್‌ನಲ್ಲಿ ಸುಮಾರು 25 ಕೋಟಿಗೂ ಅಧಿಕ ಕಾರ್ಮಿಕರು ಭಾಗವಹಿಸುವ ಸಾಧ್ಯತೆಗಳಿವೆ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಮತ್ತು ಕಾರ್ಪೋರೇಟ್ ಪರವಾದ ನೀತಿಯನ್ನು ಖಂಡಿಸಿ ಒಟ್ಟು 10 ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ್ ಬಂದ್‌ಗೆ ಕರೆ ನೀಡಿವೆ. ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗ ಹೆಚ್ಚುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳು ಏರುತ್ತಿವೆ, ವೇತನ ಕುಸಿಯುತ್ತಿದೆ ಮತ್ತು ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ನಾಗರಿಕ ಸೌಲಭ್ಯಗಳ ಮೇಲಿನ ಸಾಮಾಜಿಕ ವಲಯದ ವೆಚ್ಚವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆಗಳ ವೇದಿಕೆ ಆರೋಪಿಸಿದೆ. ಭಾರತ್ ಬಂದ್ ಕಾರಣದಿಂದ ಬ್ಯಾಂಕಿಂಗ್, ವಿಮೆ, ಅಂಚೆ ಕಚೇರಿ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಸಿಟಿಜನ್ ನ್ಯೂಸ್ ಪುತ್ತೂರು ನಲ್ಲಿದೆ.. ಲಿಂಕ್ ಇಲ್ಲಿದೆ… https://www.citizennewsputtur.com/2025/07/bharat-bandh-2025-strike-july-9-what-to.html#
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…