Advertisement
MIRROR FOCUS

ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|

Share

ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ ಸಿಂಗ್ ದೆಹಲಿಯಲ್ಲಿ  ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, BSF ವ್ಯವಸ್ಥೆ , ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದು, ಇದರಿಂದ ಅತ್ಯಧಿಕ ಮಳೆ ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸ್ಥಿತಿಗತಿಗಳನ್ನು ಅರಿಯಲು ಹಾಗೂ ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ ಎಂದರು. ಈ ಹವಾಮಾನ ಮುನ್ಸೂಚನಾ ವ್ಯವಸ್ಥೆ, ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳನ್ನು ಅತ್ಯಂತ ನಿಖರವಾಗಿ ಅರಿಯಲು ಸಹಾಯ ಮಾಡುತ್ತದೆ. ಈ ವ್ಯವಸ್ಥೆಯನ್ನು 2022ರಿಂದ ಪ್ರಾಯೋಗಿಕವಾಗಿ ಪರಿಚಯಿಸಲಾಗಿತ್ತು. ಇದೀಗ ಅದನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲಾಗಿದೆ. ಇದು ಮುಂಗಾರು ಮಳೆಯ ಮೇಲೆ ನಿಗಾ ಇರಿಸುವುದು. ಚಂಡಮಾರುತಗಳನ್ನು ಅರಿಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಕೃಷಿ, ವಿಪತ್ತು ನಿರ್ವಹಣೆ, ಪ್ರವಾಹ ಮುನ್ನೆಚ್ಚರಿಕೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ.

ಭಾರತ್ ಮುನ್ಸೂಚನೆ ವ್ಯವಸ್ಥೆ ಎಂದರೇನು: ಇದು ವಿಶ್ವದ ಅತ್ಯುನ್ನತ ಹವಾಮಾನ ಮುನ್ಸೂಚನೆಯ ಮಾದರಿ.  ಭಾರತದ ಹೊಸ ಹೈ-ರೆಸಲ್ಯೂಶನ್ BSF ಮಾದರಿಯು ಪಂಚಾಯತ್ ಮಟ್ಟದಲ್ಲಿ 6-ಕಿಮೀ ನಿಖರತೆಯ ಮುನ್ಸೂಚನೆಗಳನ್ನು ನೀಡುತ್ತದೆ, ಇದು ಯುರೋಪಿಯನ್, ಬ್ರಿಟಿಷ್ ಮೊದಲಾದ ಹವಾಮಾನ  ವ್ಯವಸ್ಥೆಗಳನ್ನು ನಿಖರತೆಯಲ್ಲಿ ಮೀರಿಸುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಈಗ ಬಿಡುಗಡೆ ಮಾಡಿದ ವಿಶ್ವದ ಮೊದಲ ಸ್ಥಳೀಯ ಹೈ-ರೆಸಲ್ಯೂಶನ್ ಹವಾಮಾನ ಮಾದರಿ, ಭಾರತ್ ಮುನ್ಸೂಚನೆ ವ್ಯವಸ್ಥೆ(BSF) ಅನ್ನು ಪುಣೆಯ ಸಂಸ್ಥೆ ಅಭಿವೃದ್ಧಿಪಡಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

7 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

7 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

21 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

22 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

23 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

23 hours ago