ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಯಾತ್ರೆ ನಡೆಸಿದ ಯುವಕನ ಮೇಲೆ ಎಫ್‌ಐಆರ್ ದಾಖಲಾಗಿದೆ.
ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಡೋ ಯಾತ್ರೆಯಲ್ಲಿ ಈತ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಯಾತ್ರೆ ಮಾಡಿದ್ದು, ಬಿಜೆಪಿ 40% ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದರು.
ಗುಂಡ್ಲುಪೇಟೆ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬುವರು ಚಾಮರಾಜನಗರ ಸಿಇಎನ್ ಠಾಣೆಗೆ ದೂರು ನೀಡಿದ್ದು, ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಶೀಘ್ರವಾಗಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.ಈ ಬಗ್ಗೆ ಯುವಕನ ವಿರುದ್ಧ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…