ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ, ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಹೆಸರು ದಾಖಲಿಸುವ ಮೂಲಕ ವಿಶ್ವ ದಾಖಲೆಯ ಸಾಧನೆ ಮಾಡಿದ್ದಾರೆ. ಕಳೆದ ಏಳು ದಿನಗಳಿಂದ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಈ ದಾಖಲೆ ಮಾಡಿರುವ ಅವರಿಗೆ ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ತಂಡ ಅಧಿಕೃತ ಘೋಷಣೆಯೊಂದಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.
ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ರೆಮೋನಾ ಪಿರೇರಾ ಇದೇ 21 ರಂದು ಬೆಳಿಗ್ಗೆಯಿಂದ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದರು. ಪ್ರತಿ ಮೂರು ಗಂಟೆಗೆ 15 ನಿಮಿಷಗಳ ಬಿಡುವನ್ನು ಹೊರತು ಪಡಿಸಿ ನಿರಂತರವಾಗಿ ಪ್ರದರ್ಶನ ನೀಡಿದ ರೆಮೋನಾ ನಿನ್ನೆ ಮಧ್ಯಾಹ್ನ ಪ್ರದರ್ಶನವನ್ನು ಪೂರ್ಣಗೊಳಿಸುವ ಮೂಲಕ 170 ಗಂಟೆಗಳ ನಿರಂತರ ಭರತನಾಟ್ಯ ಪ್ರದರ್ಶನ ನೀಡಿದ ಹೆಗ್ಗಳಿಗೆ ಪಾತ್ರರಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel