ಭಾರತೀಯ ಕಿಸಾನ್ ಸಂಘ, ಎಣ್ಮೂರು ವಲಯದ ವತಿಯಿಂದ ಪುತ್ತೂರು ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಅವರಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಳಾಯಿತ್ತೋಡಿಯಲ್ಲಿ ನಿರ್ಮಾಣವಾಗಲಿರುವ 33 ಕೆ.ವಿ. ವಿದ್ಯುತ್ ಉಪಕೇಂದ್ರದ ಪ್ರಗತಿಯ ಬಗ್ಗೆ ವಿಚಾರಿಸಿ, ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಮೆಸ್ಕಾಂ ಸುಬ್ರಹ್ಮಣ್ಯ ವಿಭಾಗದ ಎ.ಇ. ಅವರೊಂದಿಗೂ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿಕೊಟ್ಟು ಕುಳಾಯಿತ್ತೋಡಿ ವಿದ್ಯತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸಲಾಯಿತು. ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಅಧ್ಯಕ್ಷ ಶ್ರೀನಂದನ.ಕೆ ಇವರು ಮನವಿಯನ್ನು ಹಸ್ತಾಂತರಿಸಿದರು. ಭಾರತೀಯ ಕಿಸಾನ್ ಸಂಘ ಸುಳ್ಯದ ಅಧ್ಯಕ್ಷರಾದ ಎಂ.ಜಿ.ಪ್ರಭಾಕರ ರೈ, ಸದಸ್ಯರಾದ ನೆಟ್ಟಾರು ಗೋಪಾಲಕೃಷ್ಣ ಭಟ್, ಕರ್ವಂಕಲ್ಲು ಗೋಪಾಲಕೃಷ್ಣ ಭಟ್, ಸೀತಾರಾಮ, ಪಿ.ಆರ್.ಭಟ್ ದೇವಸ್ಯ, ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಕಾರ್ಯದರ್ಶಿ ಯತಿರಾಜ ಜೊತೆಗಿದ್ದರು.
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…
ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…
ಪಡಿತರ ಚೀಟಿಗೆ ಆಧಾರ್ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…
ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…
ಎಥೆನಾಲ್ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…