ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…