ನಿವೃತ್ತ ಸೇನಾ ಯೋಧರೊಬ್ಬರು ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಾವನ್ನಪ್ಪಿದ ಘಟನೆ ಮಂಡ್ಯದ ಸಾತನೂರು ರಸ್ತೆಯಲ್ಲಿ ನಡೆದಿದೆ. ಸಾತನೂರಿನ ಕುಮಾರ್ (37) ಸಾವಿಗೀಡಾದ ನಿವೃತ್ತ ಯೋಧ. ಕುಮಾರ್ ತಮ್ಮ ತಂದೆಯ ಜೊತೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು.
ಮಂಡ್ಯದ ಹೊರ ವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದರು. ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳಕ್ಕೆ ಬಿದ್ದ ಯೋಧನ ಮೇಲೆ ಹಿಂದಿನಿಂದ ವೇಗವಾಗಿ ಬಂದ ಲಾರಿ ಹರಿದಿದೆ. ಪರಿಣಾಮ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಮಾರ್ ಪರೀಕ್ಷೆಯೊಂದನ್ನು ಬರೆಯುವ ಸಲುವಾಗಿ ಊರಿಗೆ ಬಂದಿದ್ದರು. ನಿನ್ನೆ ಸಂಜೆ ತಂದೆಯೊಂದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…