ಬಂಟ್ವಾಳ ತಾಲೂಕಿನ ಮಾವಿನಕಟ್ಟೆಯಲ್ಲಿರುವ ಕೃಷಿಕ, ಪರಿಸರ ಪ್ರೇಮಿ, ಪಕ್ಷಿ ಪ್ರೇಮಿ ನಿತ್ಯಾನಂದ ಶೆಟ್ಟಿ ಅವರು ತಮ್ಮ ಎರಡು ಎಕರೆ ಭೂಮಿಯನ್ನು ಪಕ್ಷಿಗಳಿಗಾಗಿ ಮೀಸಲಿಟ್ಟಿದ್ದಾರೆ. ಇಲ್ಲಿ ಹಾಗುವ ಯಾವುದೇ ಹಣ್ಣುಗಳನ್ನು ತೆಗೆಯದೆ ಪಕ್ಷಿಗಳಿಗೆ ತಿನ್ನಲು ಬಿಡುತ್ತಿದ್ದಾರೆ. ತೋಟದಲ್ಲಿ ಪಕ್ಷಿಗಳಿಗಾಗಿ ಅಲ್ಲಲ್ಲಿ ಗೂಡುಗಳನ್ನು ಕೂಡಾ ನಿರ್ಮಿಸಿದ್ದಾರೆ.
ಇತ್ತೀಚೆಗೆ ನಿತ್ಯಾನಂದ ಶೆಟ್ಟಿ ಅವರ ತಾಯಿ ನಿಧನರಾದರು. ಅವರ ಅಂತ್ಯಕ್ರಿಯೆ ವೇಳೆ ಮಾವಿನ ಮರವನ್ನು ಕಡಿಯಲಾಗಿತ್ತು. ಇದಕ್ಕಾಗಿ ತಾಯಿಯ ಉತ್ತರಕ್ರಿಯೆ ದಿನ ಹಸಿರು ಆರಾಧನೆ ಎಂಬ ಯೋಜನೆ ಮಾಡಿದ್ದಾರೆ. ತಾಯಿಯ ಅಂತ್ಯಕ್ರಿಯೆ ಮಾಡಿದ ಸ್ಥಳದಲ್ಲಿ ಸುಮಾರು 20 ಬಗೆಯ ವಿವಿಧ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ.
ಒಂದು ಮರವನ್ನು ಕಡಿದ ಕಾರಣದಿಂದಾಗಿ ಹಲವು ಗಿಡಗಳನ್ನು ನೆಟ್ಟು ಪರಿಸರದ ಮೇಲಿನ ತಮ್ಮ ಪ್ರೀತಿಯನ್ನು ತೋರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…