ಸುಳ್ಯ ತಾಲೂಕಿನ ಕಲ್ಮಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಲಾಭಿವೃದ್ಧಿ ಸಮಿತಿ , ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಪಕ್ಷಿಗಳ ಛಾಯಾಚಿತ್ರ ಪ್ರದರ್ಶನ ನಡೆಯಿತು.
ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹಾಗೂ ರಾಧಾಕೃಷ್ಣ ಉಡುವೆಕೋಡಿ ಅವರು ತೆಗೆದಿರುವ ಪಕ್ಷಿಗಳ ಚಿತ್ರ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಶಾಲಾಮುಖ್ಯ ಶಿಕ್ಷಕಿ ವಜ್ರಾಕ್ಷಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ, ಕೃಷಿಕ ವನ್ಯಜೀವಿ ಛಾಯಾಗ್ರಾಹಕ ರಾಧಾಕೃಷ್ಣ ಉಡುವೆಕೋಡಿ , ನಿವೃತ್ತ ಶಿಕ್ಷಕ ಸುಬ್ರಾಯ ಓಣಿಯಡ್ಕ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪಕ್ಷಿಗಳ ಚಿತ್ರವನ್ನು ವೀಕ್ಷಿಸಿದರು. ಮಕ್ಕಳಿಗಾಗಿ ವಿಶೇಷವಾದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಹಕ್ಕಿಗಳ ಪರಿಚಯ ಹಾಗೂ ವಿವರಣೆಯ ಮೂಲಕ ಮಕ್ಕಳಲ್ಲಿ ಪರಿಸರ ಆಸಕ್ತಿಯನ್ನು ಮೂಡಿಸುವ ಪ್ರಯತ್ನ ನಡೆಸಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel