ಗ್ರಾಮ ಪಂಚಾಯತ್ ಗಳಲ್ಲಿ ಜನನ ಮರಣ ಪ್ರಮಾಣ ಪತ್ರ ಪಡೆಯುವ ಅವಕಾಶ

September 24, 2020
8:50 PM
Panchayath
ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ.

Advertisement
Advertisement
Advertisement
Advertisement
Advertisement

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. 2015 ಏಪ್ರಿಲ್ 1 ರ ಪೂರ್ವದಲ್ಲಿ ನೋಂದಣಿಯಾದ ಜನನ ಮರಣ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಘಟನೆಗಳು ನೋಂದಣಿಯಾದ ತಾಲೂಕು ಕಚೇರಿ, ನಗರ ಸ್ಥಳೀಯ ಸಂಸ್ಥೆಗಳನ್ನು ಸಂಪರ್ಕಿಸಬಹುದು.

Advertisement

ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ನೋಂದಣಿಯಾದ ಜನನ ಮರಣ ಘಟನೆಗಳನ್ನು ಹೆಸರು, ದಿನಾಂಕ, ತಂದೆ, ತಾಯಿಯ ಹೆಸರು ನಮೂದಿಸಿ ಪ್ರಮಾಣ ಪತ್ರಗಳನ್ನು ಹುಡುಕಬಹುದು. ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊರಗಡೆ ನೋಂದಣಿಯಾದ ಜನನ ಮರಣ ಘಟನೆಗಳ ಪ್ರಮಾಣ ಪತ್ರಗಳನ್ನು ಹುಡುಕಲು ನೋಂದಣಿ ಸಂಖ್ಯೆ ಕಡ್ಡಾಯವಾಗಿರುತ್ತದೆ. ಗ್ರಾಮ ಪಂಚಾಯತ್ ಗಳಲ್ಲಿ ಪ್ರತಿಯೊಂದು ಜನನ ಮರಣ ಪ್ರಮಾಣ ಪತ್ರದ ಪ್ರತಿಗಳಿಗೆ ರೂ. 5 ಶುಲ್ಕ ಪಾವತಿಸಬೇಕು ಎಂದು ದ.ಕ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ಅಪರ ಜಿಲ್ಲಾ ಜನನ ಮರಣಗಳ ರಿಜಿಸ್ಟ್ರಾರ್ ಪ್ರಕಟಣೆ ತಿಳಿಸಿದೆ.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಊರುಗೋಲಾಗಿರುವ ಕೃಷಿ ಪತ್ತಿನ ಸಹಕಾರಿ ಸಂಘ
March 8, 2025
10:35 PM
by: The Rural Mirror ಸುದ್ದಿಜಾಲ
ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ
March 8, 2025
10:30 PM
by: The Rural Mirror ಸುದ್ದಿಜಾಲ
ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ
March 8, 2025
6:52 AM
by: The Rural Mirror ಸುದ್ದಿಜಾಲ
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಪೆಸ್ಟ್ ಗೆ ಚಾಲನೆ
March 8, 2025
6:08 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror