ಇನ್ನು ಮುಂದೆ ಮನೆಬಾಗಿಲಿಗೇ ಜನನ, ಮರಣ ಪತ್ರಗಳು ಬರಲಿವೆ. ಈ ಬಗ್ಗೆ ಕಂದಾಯ ಇಲಾಖೆಯು ಅಂಚೆ ಇಲಾಖೆ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಮನೆ ಬಾಗಿಲಿಗೆ ಪ್ರಮಾಣ ಪತ್ರ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಅಂಚೆ ಇಲಾಖೆಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ.
Advertisement
ಹೀಗಾಗಿ ಇನ್ನು ಮುಂದೆ ಸಾರ್ವಜನಿಕರು ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗಾಗಿ ನಾಡಕಚೇರಿ ಹಾಗೂ ಆಸ್ಪತ್ರೆಗಳಿಗೆ ಅಲೆದಾಡಬೇಕಾಗಿಲ್ಲ. ಈ ಪ್ರಮಾಣ ಪತ್ರಗಳು ಸ್ಪೀಡ್ ಪೋಸ್ಟ್ ನಲ್ಲಿ ಮನೆ ಬಾಗಿಲಿಗೆ ಬರಲಿವೆ. ಜನನ ಮತ್ತು ಮರಣ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಪ್ರಮಾಣ ಪತ್ರಗಳು ಸಿದ್ದವಾಗುತ್ತವೆ. ಹೀಗೆ ತಯಾರಾದ ಪ್ರಮಾಣ ಪತ್ರಗಳನ್ನು ಆಯಾ ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಿಗೆ ಅಂಚೆ ಸಿಬ್ಬಂದಿಯೇ ತೆರಳಿ, ಅವುಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement