ಕಾಂಗ್ರೆಸ್ ಸರ್ಕಾರದ ಗೆಲುವಿನಿಂದ ಪತನವಾದ ಬಿಜೆಪಿ ಸರ್ಕಾರದ ಕಾಮಗಾರಿಗಳಿಗೆ ಬ್ರೇಕ್ ಹಾಕಿ ದ್ದಾರೆ . ವಿವಿಧ ಇಲಾಖೆಗಳಿಂದ ಇನ್ನೂ ಪ್ರಾರಂಭವಾಗದಂತಹ ಹಿಂದಿನ ಸರ್ಕಾರದ ಎಲ್ಲ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಸರ್ಕಾರ ಜಾರಿ ಮಾಡಿದ ಎಲ್ಲ ಯೋಜನೆಗಳನ್ನು ತಡೆಹಿಡಿಯಲಾಗಿದ್ದು, ಅವುಗಳನ್ನು ಪರಿಶೀಲಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇದಷ್ಟೇ ಅಲ್ಲದೇ ಎಲ್ಲ ಇಲಾಖೆಗಳು ಹಾಗೂ ಇಲಾಖೆಗಳ ಅಡಿ ಬರುವ ನಿಗಮ ಮಂಡಳಿ, ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಹಣ ಬಿಡುಗಡೆ ಹಾಗೂ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ ಎಂದು ಹಣಕಾಸು ಇಲಾಖೆಯ ಕಾರ್ಯದರ್ಶಿ ಡಾ ಏಕರೂಪ್ ಕೌರ್ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel