ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ 190 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಧರ್ಮೇಂದ್ರ ಪ್ರಧಾನ್, ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಮಂತ್ರಿ ಮನ್ಸುಕ್ ಮಾಂಡವಿಯಾ, ಉಪ ಪ್ರಭಾರಿ ಅಣ್ಣಾಮಲೈ ಜೊತೆ ಸುದ್ದಿಗೋಷ್ಠಿ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಗೆ ಹರೀಶ್ ಪೂಂಜಾ, ಮಂಗಳೂರು – ವೇದವ್ಯಾಸ್ ಕಾಮತ್, ಮೂಡಬಿದಿರೆ – ಉಮಾನಾಥ್ ಕೋಟ್ಯಾನ್, ಮಂಗಳೂರು ನಗರ – ಭರತ್ ಶೆಟ್ಟಿ, ಪುತ್ತೂರು – ಆಶಾ ತಿಮ್ಮಪ್ಪ, ಸುಳ್ಯ - ಭಾಗೀರಥಿ ಮುರುಳ್ಯ ಇವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸುಳ್ಯ ಹಾಗೂ ಪುತ್ತೂರು ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ಹಾಲಿ ಶಾಸಕರನ್ನೇ ಅಂತಿಮಗೊಳಿಸಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…