ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಅಪಾರ ಹಾನಿ ಸಂಭವಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು, 5 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ. ರಾಜಧಾನಿಯಲ್ಲಿಂದು ಮಳೆ ಹಾನಿ ಪರಿಸ್ಥಿತಿ ಪರಿಶೀಲಿಸಿದ ಅವರು, ಮಲೆನಾಡಿನಲ್ಲಿ ಕಾಫಿ ಬೆಳೆಗೆ ಹಾನಿಯಾಗಿದೆ. ಭತ್ತ ಬೆಳೆ ನೀರಿನಲ್ಲಿ ಮುಳುಗಿದೆ . ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳು ಜಲಾವೃತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಶೀಘ್ರವೇ ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಎಲ್ಲೆಲ್ಲಿ ಅನಾಹುತವಾಗಿದೆಯೋ ಅಲ್ಲಿಗೆ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1ಸಾವಿರ ಕೋಟಿ ರೂಪಾಯಿ ಮೀಸಲಿಡುವಂತೆ ಆಗ್ರಹಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಈಗಾಗಲೇ ಜಲಾವೃತವಾಗಿದ್ದು, ಸಿಲ್ಕ್ ಬೋರ್ಡ್‌ನಲ್ಲಿ ಪ್ರತಿದಿನ ಪ್ರವಾಹ ಉಂಟಾಗುತ್ತಿದೆ ಎಂದು ಹೇಳಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…