8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ | ಇಲ್ಲಿದೆ ಪಟ್ಟಿ

April 12, 2023
2:52 PM

ಮೇ 10 ರಂದು ನಡೆಯಲಿರುವ ಕರ್ನಾಟಕದ ಚುನಾವಣೆಗೆ ಭಾರಿ ಕಸರತ್ತು ನಡೆಸಿದ ಬಿಜೆಪಿ ಕೊನೆಗೂ 189 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಸುಮಾರು 20 ರಿಂದ 30 ಹಾಲಿ ಶಾಸಕರಿಗೆ ಕೋಕ್ ಎಂದು ಹೇಳಲಾಗಿದೆ. ಆದರೆ ಮೊದಲ ಪಟ್ಟಿಯಲ್ಲಿ 8 ಜನ ಹಾಲಿ ಶಾಸಕರಿಗೆ ಮಾತ್ರ ಟಿಕೆಟ್ ಸಿಕ್ಕಿಲ್ಲ. ಅವರ ಪಟ್ಟಿ ಕೆಳಗಿನಂತಿದೆ.

Advertisement
Advertisement

ಪುತ್ತೂರು- ಸಂಜೀವ ಮಠಂದೂರು

Advertisement

2013 ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ನ ಶಕುಂತಲಾ ಶೆಟ್ಟಿಯವರ ಎದುರು 4,289 ಮತಗಳ ಅಂತರದಲ್ಲಿ ಸೋಲು ಕಂಡಿದ್ದ ಅವರು 2018 ರಲ್ಲಿ ಅದೇ ಶಕುಂತಲಾ ಶೆಟ್ಟಿಯವರನ್ನು 19,477 ಮತಗಳ ಅಂತರದಲ್ಲಿ ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. ಅವರಿಗೆ ಈಗ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರ ಬದಲಿಗೆ ಆಶಾ ತಿಮ್ಮಪ್ಪ ಅವರಿಗೆ ಮಣೆ ಹಾಕಿದೆ. ಕಾಂಗ್ರೆಸ್ ಇಲ್ಲಿ ಇನ್ನೂ ಟಿಕೆಟ್ ಘೋಷಿಸಿಲ್ಲ.

ಸುಳ್ಯ – ಎಸ್. ಅಂಗಾರ

Advertisement

1989 ರಲ್ಲಿ ಸುಳ್ಯ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿದು ಕಾಂಗ್ರೆಸ್‌ನ ಕೆ.ಕುಶಲರವರ ಎದುರು ಸೋತಿದ್ದ ಎಸ್ ಅಂಗಾರರವರು ತದನಂತರದ ಆರು ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಡಾ.ಬಿ.ರಘುರವರ ವಿರುದ್ದ 26,068 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.  ಈಗ ಅವರ ಬದಲಿಗೆ ಭಾಗೀರಥಿ ಮುರುಳ್ಯ ಎಂಬುವವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪನವರಾಗಿದ್ದಾರೆ. ನಂದಕುಮಾರ್‌ ಇಲ್ಲಿ ಕಾಂಗ್ರೆಸ್‌ ಬಂಡಾಯವಾಗಿ ಸ್ಫರ್ಧೆ ಮಾಡುವ ಹಂತದಲ್ಲಿದ್ದಾರೆ. ಆಮ್‌ ಆದ್ಮಿ ಪಕ್ಷವೂ ಇಲ್ಲಿ ಎಂಬಿಎ ಪದವೀಧರೆ ಸುಮನಾ ಬೆಳ್ಳಾರ್ಕರ್‌ ಅವರನ್ನು ಕಣಕ್ಕೆ ಇಳಿಸಿದೆ.

ಉಡುಪಿ – ರಘುಪತಿ ಭಟ್

Advertisement

ಉಡುಪಿಯಲ್ಲಿ ರಘುಪತಿ ಭಟ್ 2004, 2008 ಮತ್ತು 2018 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಪ್ರಮೋದ್ ಮಧ್ವರಾಜ್‌ರವರನ್ನು 12,044 ಮತಗಳ ಅಂತರದಲ್ಲಿ ಸೋಲಿಸಿದ್ದರು. ಆನಂತರ ಪ್ರಮೋದ್ ಮಧ್ವರಾಜ್ ಸಹ ಬಿಜೆಪಿ ಸೇರಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಬ್ಬರಿಗೂ ಟಿಕೆಟ್ ನಿರಾಕರಿಸಿರುವ ಬಿಜೆಪಿ ಯಶ್ಪಾಲ್ ಸುವರ್ಣ ಎಂಬುವವರಿಗೆ ಟಿಕೆಟ್ ನೀಡಿದೆ. ಅವರು ಹಿಜಾಬ್ ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಸಾದರಾಜ್ ಕಂಚನ್‌ರವರು ಇಲ್ಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಕಾಪು – ಲಾಲಾಜಿ ಮೆಂಡನ್

Advertisement

ಕಾಪುವಿನಲ್ಲಿ 1994-1999 ರ ಚುನಾವಣೆಗಳಲ್ಲಿ ಬಿಜೆಪಿಯಿಂದ ಸೋಲು ಕಂಡಿದ್ದ ಲಾಲಾಜಿ ಮೆಂಡನ್ ನಂತರ 2004, 2008 ಮತ್ತು 2018 ರಲ್ಲಿ ಶಾಸಕರಾಗಿ ಆಯ್ಕೆಯಾದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿನಯ್ ಕುಮಾರ್ ಸೊರಕೆ ವಿರುದ್ಧ 11,917 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದರು. ಈಗ ಅವರ ಬದಲಿಗೆ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕಾಂಗ್ರೆಸ್ ಇಲ್ಲಿ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ.

ಶಿರಹಟ್ಟಿ – ರಾಮಪ್ಪ ಲಮಾಣಿ

Advertisement

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಶಿರಹಟ್ಟಿಯಲ್ಲಿ ರಾಮಪ್ಪ ಲಮಾಣಿಯವರು 2008 ಮತ್ತು 2018 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ರಾಮಕೃಷ್ಣ ದೊಡ್ಮನಿ ವಿರುದ್ಧ 29,993 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು. ಈಗ ಅವರ ಬದಲಿಗೆ ಡಾ.ಚಂದ್ರು ಲಮಾಣಿಯವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

ರಾಮದುರ್ಗ – ಮಹದೇವಪ್ಪ ಯಾದವಾಡ

Advertisement

ಮಹದೇವಪ್ಪ ಯಾದವಾಡರು ರಾಮದುರ್ಗದಲ್ಲಿ 1999 ರಲ್ಲಿ ಸೋಲು ಕಂಡಿದ್ದರು. ನಂತರ 2004 ಮತ್ತು 2018 ರಲ್ಲಿ ಗೆಲುವು ದಾಖಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಶೋಕ್ ಮಹದೇವಪ್ಪ ಪಟ್ಟಣ ವಿರುದ್ಧ 2,875 ಮತಗಳ ಅಂತರದಲ್ಲಿ ಜಯ ಕಂಡಿದ್ದರು. ಈಗ ಅವರ ಬದಲಿಗೆ ಬಿಜೆಪಿಯು ಚಿಕ್ಕರೇವಣ್ಣನವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಸೋತ ಅಭ್ಯರ್ಥಿ ಮಾಜಿ ಶಾಸಕ ಅಶೋಕ್ ಮಹದೇವಪ್ಪ ಪಟ್ಟಣ್ ರವರಿಗೆ ಟಿಕೆಟ್ ನೀಡಿದೆ.

ಬೆಳಗಾವಿ ಉತ್ತರ – ಅನಿಲ್ ಎಸ್ ಬೆನಕೆ

Advertisement

2018 ರಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಪ್ಲಿಕೇಶನ್ ಅನಿಲ್ ಎಸ್ ಬೆನಕೆ ಕಾಂಗ್ರೆಸ್ನ ಫೈರೋಜ್ ನೂರುದ್ದೀನ್ ಸೇಠ್‌ರವರನ್ನು 17,267 ಮತಗಳ ಅಂತರದಲ್ಲಿ ಸೋಲಿಸಿದರು. ಆದರೆ ಈ ಬಾರಿ ಅವರ ಬದಲಿಗೆ ಬಿಜೆಪಿ ಡಾ.ರವಿ ಪಾಟೀಲ್‌ಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.

ಹೊಸದುರ್ಗ – ಗೂಳಿಹಟ್ಟಿ ಶೇಖರ್

Advertisement

ಗೂಳಿಹಟ್ಟಿ ಶೇಖರ್ ಹೊಸದುರ್ಗದಲ್ಲಿ 2008 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡರೆ 2013 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸೋಲು ಕಂಡಿದ್ದರು. 2018 ರಲ್ಲಿ ಬಿಜೆಪಿ ಸೇರಿ ಕಾಂಗ್ರೆಸ್‌ನ ಬಿ.ಜಿ ಗೋವಿಂದಪ್ಪನವರ ಎದುರು 25,992 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈಗ ಅವರ ಬದಲಿಗೆ ಎಸ್.ಲಿಂಗಮೂರ್ತಿಯವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ಬಿ.ಜಿ ಗೋವಿಂದಪ್ಪನವರಿಗೆ ಮತ್ತೆ ಟಿಕೆಟ್ ನೀಡಿದೆ.

ಇನ್ನು ಬಿ.ಎಸ್ ಯಡಿಯೂರಪ್ಪನವರ ಶಿಕಾರಿಪುರದಲ್ಲಿ ಅವರ ಬದಲಿಗೆ ಪುತ್ರ ವಿಜಯೇಂದ್ರರಿಗೆ ಟಿಕೆಟ್ ಸಿಕ್ಕರೆ, ವಿಜಯನಗರದಲ್ಲಿ ಆನಂದ್ ಸಿಂಗ್ ಬದಲಿಗೆ ಅವರ ಪುತ್ರ ಸಿದ್ಧಾರ್ಥ್ ಸಿಂಗ್ ಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror