ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಿದ್ದತೆ ಆರಂಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ.ರಾಯಚೂರಿನಿಂದ ಆರಂಭಗೊಂಡ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ 2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.
ಬಿಜೆಪಿಯ ಜನಸಂಕಲ್ಪ ಯಾತ್ರೆ ರಾಯಚೂರು ಜಿಲ್ಲೆಯಿಂದ ಆರಂಭಗೊಂಡು ಡಿಸೆಂಬರ್ 25 ಕ್ಕೆ ರಾಮನಗರ ಜಿಲ್ಲೆಯಲ್ಲಿ ಅಂತ್ಯಗೊಳ್ಳಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯು ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಸಮಾವೇಶಗಳು ಕೂಡಾ ನಡೆಯಲಿದೆ.
ರಾಯಚೂರಿನಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel