ಗ್ರಾಮೀಣ ಭಾಗದ ಮನೆ ಧ್ವಂಸಕ್ಕೆ ಯತ್ನ | ಸ್ಥಳಕ್ಕೆ ತೆರಳಿದ ದ ಕ ಜಿಲ್ಲೆಯ ಬಿಜೆಪಿ ಶಾಸಕರು | ಅರಣ್ಯ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ |

October 9, 2023
10:40 AM
ಬೆಳ್ತಂಗಡಿಯ ಗ್ರಾಮೀಣ ಭಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ ನ್ಯಾಯ ಅಗತ್ಯ ಎಂದು ಒತ್ತಾಯಿಸಿದರು.
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ದೇವಣ್ಣ ಗೌಡ ಎಂಬವರ ಕುಟುಂಬ ತಮ್ಮ ಸ್ವಾಧೀನದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದ ವೇಳೆ ಆರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿ ಪಡಿಸಿ ಮನೆಯ ಅಡಿಪಾಯ ಕಿತ್ತೆಸದ ಘಟನೆ ಶುಕ್ರವಾರ ನಡೆದಿತ್ತು. ಸೋಮವಾರ ಮತ್ತೆ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ಆಗಮಿಸಿ ಮನೆ ತೆರವು ಮಾಡದಂತೆ ತಡೆದರು.
ಶುಕ್ರವಾರ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ  ಬೆಳ್ತಂಗಡಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಸಚಿವರ ಜೊತೆ ಫೋನ್ ಮಾತನಾಡಿದ್ದರು. ಮುಂದೆ ಸರ್ವೆ ನಡೆಸಿ ಕ್ರಮ ಕೈಗೊಳ್ಳುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಲಾಗಿತ್ತು.
ಆದರೆ ಸೋಮವಾರ(ಅ.9) ಬೆಳಗ್ಗೆ, ಮತ್ತೆ ಅಧಿಕಾರಿಗಳು ಮನೆ ತೆರವುಗೊಳಿಸಲು ಮುಂದಾದಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಂಟ್ವಾಳ ಶಾಸಕ ರಾಜೇಶ್ ನಾಯಕ್‌ , ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಗಳೂರು ಉತ್ತರ ಕ್ಷೇತ್ರ ಶಾಸಕ ಭರತ್ ಶೆಟ್ಟಿ ಮೊದಲಾದ ಬಿಜೆಪಿ ನಾಯಕರು ಆಗಮಿಸಿ ಮನೆ ತೆರವುಗೊಳಿಸದಂತೆ ತಡೆದರು. ಯಾವುದೇ ಕಾರಣಕ್ಕೂ ಮನೆ ಕೆಡವಲು ಬಿಡುವುದಿಲ್ಲ, ಜಾಗದ ಅಳತೆ ಮಾಡಿ ಅಧಿಕೃತ ದಾಖಲೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇಂತಹ ಘಟನೆಗೆ ಕಾಂಗ್ರೆಸ್‌ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕಳೆಂಜದ ದೇವಣ್ಣ ಗೌಡ ಅವರ  ಕುಟುಂಬ ವಾಸಿಸುತ್ತಿದೆ. ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ ಒರಟು ರೀತಿಯಲ್ಲಿ ನಡೆದುಕೊಂಡದ್ದೇ ಆದಲ್ಲಿ ಜನರ ಪ್ರತಿಕ್ರಿಯೆಯು ಯಾವ ರೂಪದಲ್ಲಿ ಇರಬಹುದು ಎಂಬುದು ಊಹಿಸಲಸಾಧ್ಯ. ಮುಂದಿನ ಎಲ್ಲಾ ಆಗುಹೋಗುಗಳಿಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ಶಾಸಕ ಹರೀಶ್‌ ಪೂಂಜಾ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?
January 22, 2025
6:48 AM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror