Advertisement
ಪ್ರಮುಖ

ಕೊನೆಗೂ ತೆರೆಬಿತ್ತು ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಪ್ರಸಂಗ…! | ನೂತನ ಸಾರಥಿಯಾಗಿ ಯುವ ನಾಯಕ ಬಿ.ವೈ ವಿಜಯೇಂದ್ರ ಆಯ್ಕೆ | ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ

Share

ಭಾರತೀಯ ಜನತಾ ಪಾರ್ಟಿ(BJP) ಕೊನೆಗೂ ರಾಜ್ಯದ ಸಾರಥಿಯ ಆಯ್ಕೆಯನ್ನು ಮಾಡಿದೆ. ಸುಮಾರು 4-5 ತಿಂಗಳುಗಳ ಕಾಲ ಬಿಜೆಪಿ ಹೈಕಮಾಂಡ್‌(High commond) ಅಳೆದು ತೂಗಿ ಯುವ ನಾಯಕನಿಗೆ ಕರ್ನಾಟಕದ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷನ(State BJP President) ಪಟ್ಟವನ್ನು ನೀಡಿದೆ. ಈ ಮೂಲಕ ಬಿಜೆಪಿಯಲ್ಲಿ ಯುವಕರಿಗೆ ಮನ್ನಣೆ ನೀಡಲಾಗಿದೆ. ನಿನ್ನೆ ಸಂಜೆ ದೆಹಲಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಇಂದು ಮಾತನಾಡಿದ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮಾತನಾಡಿ, ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಹೇಳಿದ್ದಾರೆ.

Advertisement
Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ಅಭಿಪ್ರಾಯ ಪಡೆದು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು. ಯಡಿಯೂರಪ್ಪ (BS Yediyurappa) ಅವರು ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ ಎಂದರು. ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡುವ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗುತ್ತೇನೆ. ದೆಹಲಿಯಿಂದ ವೀಕ್ಷಕರು ಬರಲಿದ್ದಾರೆ. ಸೋಮಣ್ಣ, ಅಶೋಕ್, ಯತ್ನಾಳ್,  ಬೊಮ್ಮಾಯಿ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ತಮ್ಮ ಎಕ್ಸ್ ಖಾತೆಯಲ್ಲಿ( ಟ್ವಿಟ್ಟರ್) ಬರೆದುಕೊಂಡಿರುವ ಅವರು, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ, ಗೃಹ ಸಚಿವ ಅಮಿತ್ ಶಾ ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿಎಲ್ ಸಂತೋಷ್ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ.

The new BJP state president BY Vijayendra said that the legislative session will be held next Friday, during which the leader of the opposition will be elected. Speaking to reporters, he said that the opposition leader will be selected after taking the opinion of the MLAs. BS Yediyurappa said he had discussed with Nadda.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 day ago