3ನೇ ಅವಧಿಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ | ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯ ದೇಶವಾಗಲಿದೆ | ಮೋದಿ ಭರವಸೆ

February 6, 2024
10:52 AM

ಇನ್ನೇನು 2-3 ತಿಂಗಳು ಮಾತ್ರ ಹೈ ವೋಲ್ಟೇಜ್‌ ಲೋಕಸಭೆ ಚುನಾವಣೆಗೆ(Lokasabha Election). ದೇಶ ಮಾತ್ರವಲ್ಲ ಇಡೀ ವಿಶ್ವವಕ್ಕೇ ಭಾರತದ ಲೋಕಸಭೆ ಚುನಾವಣೆ ಬಗ್ಗೆ ಕುತೂಹಲ ಇದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ(Narendra Modi) ಬಿಜೆಪಿ (BJP) ನೇತೃತ್ವದ ಎನ್‌ಡಿಎ(NDA) ಸರ್ಕಾರದ 3ನೇ ಅವಧಿಯಲ್ಲಿ ದೇಶವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Advertisement
Advertisement

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 2014-15ರ ಮಧ್ಯಂತರ ಬಜೆಟ್ ಮಂಡಿಸಿದ ಅಂದಿನ ಹಣಕಾಸು ಸಚಿವ ಪಿ.ಚಿದಂಬರಂ ಅವರು ಹಳೆಯ ಪಕ್ಷ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರು 11ನೇ ಸ್ಥಾನಕ್ಕೆ ಹೆಮ್ಮ ಪಡುತ್ತಿದ್ದಾರೆ. ನಾವು ಐದನೇ ಸ್ಥಾನಕ್ಕೆ ಬಂದಿದ್ದೇವೆ. ನೀವು ಹನ್ನೊಂದು ಸ್ಥಾನಕ್ಕೆ ಬಂದಾಗ ಖುಷಿಪಡುತ್ತಿದ್ರಿ. ಈಗ ಐದನೇ ಸ್ಥಾನಕ್ಕೆ ಬಂದಾಗಲೂ ಖುಷಿಪಡಬೇಕು ಎಂದು ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಇಂದು ಭಾರತವು 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಆದರೆ ಅವರು (ಕಾಂಗ್ರೆಸ್) ಮೌನವಾಗಿದ್ದಾರೆ. 30 ವರ್ಷಗಳಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಲಿದೆ ಎಂಬ ದೃಷ್ಟಿಯನ್ನು ಅವರು ಕಂಡಿದ್ದಾರೆ. ರಾಷ್ಟ್ರವನ್ನು ಇಷ್ಟು ದಿನ ಕಾಯಲು ನಾವು ಬಿಡುವುದಿಲ್ಲ. ನಮ್ಮ ಮೂರನೇ ಅವಧಿಯಲ್ಲಿ ಭಾರತ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ. ಇದು ಮೋದಿ ಗ್ಯಾರಂಟಿ ಎಂದು ತಿಳಿಸಿದ್ದಾರೆ.

ಬಡವರಿಗೆ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ನಗರದ ಬಡವರಿಗೆ 80 ಲಕ್ಷ ಪಕ್ಕಾ ಮನೆಗಳನ್ನು ನಿರ್ಮಿಸಿದ್ದೇವೆ. ಕಾಂಗ್ರೆಸ್‌ನ ವೇಗಕ್ಕೆ ಹೋಲಿಸಿದರೆ, ಈ ಕೆಲಸ ಮಾಡಲು 100 ವರ್ಷ ಬೇಕಾಗುತ್ತಿತ್ತು. ಆಗ ಐದು ತಲೆಮಾರುಗಳು ಕಳೆದು ಹೋಗುತ್ತಿದ್ದವು ಎಂದು ಲೇವಡಿ ಮಾಡಿದ್ದಾರೆ.

  • ಅಂತರ್ಜಾಲ ಮಾಹಿತಿ

Prime Minister Narendra Modi has expressed hope that the country will become the third largest economy in the third term of the BJP-led NDA government. Speaking during the vote of thanks to the President’s speech in the Lok Sabha, Prime Minister Modi lashed out at the Congress.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror