ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ | ಭಾನುವಾರ ಅಭ್ಯರ್ಥಿಗಳ ಪಟ್ಟಿ ಅಂತಿಮ ಸಾಧ್ಯತೆ |

April 7, 2023
10:42 AM

ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏಪ್ರಿಲ್ 9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ, ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್. ಸಂತೋಷ್ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂವರ ಹೆಸರಿರುವ ಪಟ್ಟಿಯನ್ನು ರಾಜ್ಯ ಬಿಜೆಪಿ  ಕಳುಹಿಸಿದ್ದು, ಈ ಪಟ್ಟಿ ಕುರಿತು ಕೇಂದ್ರ ಚುನಾವಣಾ ಸಮಿತಿ ಪರಿಶೀಲನೆ ನಡೆಸಲಿದೆ. ಬಳಿಕ  ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಏಪ್ರಿಲ್  4 ರಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಮನ್ಸುಖ್ ಮಾಂಡವೀಯಾ, ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಅಣ್ಣಾಮಲೈ, ಮಾಜಿ ಉಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ  ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಕಿರುಪಟ್ಟಿ ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror