ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏಪ್ರಿಲ್ 9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ, ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್. ಸಂತೋಷ್ ಮತ್ತು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂವರ ಹೆಸರಿರುವ ಪಟ್ಟಿಯನ್ನು ರಾಜ್ಯ ಬಿಜೆಪಿ ಕಳುಹಿಸಿದ್ದು, ಈ ಪಟ್ಟಿ ಕುರಿತು ಕೇಂದ್ರ ಚುನಾವಣಾ ಸಮಿತಿ ಪರಿಶೀಲನೆ ನಡೆಸಲಿದೆ. ಬಳಿಕ ಪಕ್ಷದ ವರಿಷ್ಠರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಏಪ್ರಿಲ್ 4 ರಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಮನ್ಸುಖ್ ಮಾಂಡವೀಯಾ, ಕೇಂದ್ರೀಯ ಚುನಾವಣಾ ಸಮಿತಿ ಸದಸ್ಯ ಅಣ್ಣಾಮಲೈ, ಮಾಜಿ ಉಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ ಸಭೆಯಲ್ಲಿ ಪಕ್ಷದ ಅಭ್ಯರ್ಥಿಗಳ ಕಿರುಪಟ್ಟಿ ಅಂತಿಮಗೊಳಿಸಲಾಗಿದೆ ಎನ್ನಲಾಗಿದೆ
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…