ಇಂದು, ನಾಳೆ ಬಿಜೆಪಿಯಿಂದ ಮಹಾ ಪ್ರಚಾರ ಅಭಿಯಾನ : ಭರ್ಜರಿಯಾಗಿ ನಡೆದ ಮಹಾಪ್ರಚಾರ ಅಭಿಯಾನ

April 25, 2023
7:52 PM

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿಯು ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ‘ವಿಶೇಷ ಮಹಾಪ್ರಚಾರ ಅಭಿಯಾನ’ ಹಮ್ಮಿಕೊಂಡಿದೆ.

Advertisement

ಈ ಮಹಾಪ್ರಚಾರ ಅಭಿಯಾನದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಧರ್ಮೆಂದ್ರ ಪ್ರಧಾನ್‌, ನಿರ್ಮಲಾ ಸೀತಾರಾಮನ್‌, ಸ್ಮೃತಿ ಇರಾನಿ, ಮನಸುಖ್‌ ಮಾಂಡವೀಯ ಸೇರಿದಂತೆ 98 ಮಂದಿ ಕೇಂದ್ರ ಸಚಿವರು, ನಾಯಕರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ನಗರ ಸಭೆ ಅಧ್ಯಕ್ಷರು ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ. ಎಲ್ಲ ಕ್ಷೇತ್ರಗಳಲ್ಲೂ ಏಕಕಾಲಕ್ಕೆ ಏಕ ಪ್ರಕಾರವಾಗಿ ಈ ಮಹಾಪ್ರಚಾರ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ 150 ರಾಜ್ಯ ನಾಯಕರು ಮತ್ತು 98 ಕೇಂದ್ರ ನಾಯಕರು ಪ್ರಧಾನಿ ನರೇಂದ್ರ ಮೋದಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಮಹಾಪ್ರಚಾರ ಅಭಿಯಾನ ಬೆಳಗ್ಗೆಯಿಂದ ಸಂಜೆವರೆಗೆ ನಡೆಯಲಿದೆ. ಒಂದು ಪ್ರತಿಕಾಗೋಷ್ಠಿ, ಹೋಬಳಿ, ತಾಲೂಕು ಕೇಂದ್ರಗಳಲ್ಲಿ ರೋಡ್‌ ಶೋ, ಸಾರ್ವಜನಿಕ ಸಭೆ, ಮನೆ-ಮನೆಗೆ ಭೇಟಿ ನೀಡಿ ಮತಯಾಚನೆ, ಕಾರ್ಯಕರ್ತರು, ಸಮುದಾಯದ ಮುಖಂಡರು, ವಿವಿಧ ಯೋಜನೆಗಳ ಫಲಾನುಭವಿಗಳ ಸಭೆ ಇರಲಿದೆ. ಇದೇ ವೇಳೆ ನಮ್ಮ ಅಭ್ಯರ್ಥಿಗಳು ಅವರ ಕ್ಷೇತ್ರದ ವ್ಯಾಪ್ತಿಯ ಮಹಾಪುರುಷರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ದೇವಸ್ಥಾನ-ಮಠಮಾನ್ಯಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕಟೀಲ್ ವಿವರಿಸಿದರು.

ನಮ್ಮದು ಕಾರ್ಯಕರ್ತರ ಪಕ್ಷವಾಗಿದ್ದು, ಈ ಎರಡು ದಿನಗಳ ಮಹಾಪ್ರಚಾರ ಅಭಿಯಾನವನ್ನು ಯಶಸ್ವಿಗೊಳಿಸಲಿದ್ದೇವೆ ಎಂದು ಕಟೀಲ್‌ ತಿಳಿಸಿದರು. ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತಿತರರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ
April 25, 2025
9:30 PM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್
April 25, 2025
9:15 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |
April 25, 2025
2:04 PM
by: ಸಾಯಿಶೇಖರ್ ಕರಿಕಳ
ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group