ಲೋಕ ಸಮರ, ಗೆಲುವಿನ ಲೆಕ್ಕಾಚಾರ | ಬಿಜೆಪಿ ಸ್ವತಂತ್ರವಾಗಿಯೇ 350 ಸೀಟು ಗೆಲ್ಲುತ್ತೆ, ತಮಿಳುನಾಡಿನಲ್ಲಿ 5 ಸೀಟು ಖಚಿತ: ಆರ್ಥಿಕ ತಜ್ಞ ಭಲ್ಲಾ ಭವಿಷ್ಯ

April 22, 2024
6:54 PM

ಈಗಾಗಲೇ ಲೋಕಸಭೆ ಚುನಾವಣೆಯ(Lok sabha Election-2024) ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನುಳಿದ ಭಾಗಗಳಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಕರ್ನಾಟಕದಲ್ಲಿ(Karnataka) ಮೊದಲ ಹಂತದ ಚುನಾವಣೆಗೆ ಇನ್ನು ಮೂರು ದಿನ ಮಾತ್ರ ಬಾಕಿ ಇದೆ. ಚುನಾವಣೆ ಮುನ್ನವೇ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ, ಇದೀಗ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಬಿಜೆಪಿ(BJP) ಸ್ವತಂತ್ರವಾಗಿ ಕನಿಷ್ಠ 330 ರಿಂದ 350 ಸೀಟು ಗೆಲ್ಲುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ (Surjit Bhalla) ಭವಿಷ್ಯ ನುಡಿದಿದ್ದಾರೆ.

Advertisement

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ 2019ಕ್ಕಿಂತಲೂ ಉತ್ತಮ ಫಲಿತಾಂಶ ಬರಲಿದೆ. 2019ರಲ್ಲಿ ಬಿಜೆಪಿ 303 ಕಾಂಗ್ರೆಸ್‌ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಬಾರಿ ಎನ್‌ಡಿಎ ಹೊರತುಪಡಿಸಿ, ಬಿಜೆಪಿಯೇ ಸ್ವತಂತ್ರವಾಗಿ 330 ರಿಂದ 350 ಸ್ಥಾನಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ (Tamil Nadu) ಕನಿಷ್ಠ 5 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸದ್ಯದಲ್ಲಿ ಜನರ ಮನಸ್ಥಿತಿ ಬಿಜೆಪಿ ಕಡೆಗೆ ವಾಲಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಚಾರ ಜನರ ಮೇಲೆ ಪ್ರಭಾವ ಬೀರಿದೆ. ಆದ್ದರಿಂದ 2019ರ ಫಲಿತಾಂಶಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ. ಕೇರಳದಲ್ಲಿ ಬಹುಶಃ ಒಂದು ಅಥವಾ ಎರಡು ಸ್ಥಾನಗಳಲ್ಲಿ ಗೆಲ್ಲಬಹುದು. ಇನ್ನೂ 2019ರ ಚುನಾವಣೆಯಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 44 ಸ್ಥಾನಗಳಿಗೆ ಕುಸಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಬಾರಿ ಬಿಜೆಪಿ ದೇಶದಲ್ಲಿ ಅಭೂತಪೂರ್ವ ಗೆಲುವು ಸಾಧಿಸಲಿದೆ. ಅದಕ್ಕೆ ಕಾರಣವೂ ಇದೆ. ಇಂದಿನ ಜನ ಜೀವನ ಮಟ್ಟ ಸಾಕಷ್ಟು ಸುಧಾರಣೆ ಕಂಡಿದೆ. ಭಾರತ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಬಹಳಷ್ಟು ಸಂಖ್ಯೆಯ ಜನ ಬಡತನದಿಂದ ಹೊರಬಂದಿದ್ದಾರೆ. ಜೊತೆಗೆ 2019ಕ್ಕಿಂತಲೂ ಮುಂಚೆ ಇದ್ದ ನಿರುದ್ಯೋಗಿಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಕಳೆದ 10 ವರ್ಷಗಳಲ್ಲಿ ಈ ಬೆಳವಣಿಗೆಯಾಗಿದೆ, ಈ ಎಲ್ಲ ಕಾರಣಗಳಿಂದ ಬಿಜೆಪಿ ಕಳೆದ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror