ಈಗಾಗಲೇ ಲೋಕಸಭೆ ಚುನಾವಣೆಯ(Lok sabha Election-2024) ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನುಳಿದ ಭಾಗಗಳಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಕರ್ನಾಟಕದಲ್ಲಿ(Karnataka) ಮೊದಲ ಹಂತದ ಚುನಾವಣೆಗೆ ಇನ್ನು ಮೂರು ದಿನ ಮಾತ್ರ ಬಾಕಿ ಇದೆ. ಚುನಾವಣೆ ಮುನ್ನವೇ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ, ಇದೀಗ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಬಿಜೆಪಿ(BJP) ಸ್ವತಂತ್ರವಾಗಿ ಕನಿಷ್ಠ 330 ರಿಂದ 350 ಸೀಟು ಗೆಲ್ಲುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ (Surjit Bhalla) ಭವಿಷ್ಯ ನುಡಿದಿದ್ದಾರೆ.
ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ 2019ಕ್ಕಿಂತಲೂ ಉತ್ತಮ ಫಲಿತಾಂಶ ಬರಲಿದೆ. 2019ರಲ್ಲಿ ಬಿಜೆಪಿ 303 ಕಾಂಗ್ರೆಸ್ 52 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಬಾರಿ ಎನ್‌ಡಿಎ ಹೊರತುಪಡಿಸಿ, ಬಿಜೆಪಿಯೇ ಸ್ವತಂತ್ರವಾಗಿ 330 ರಿಂದ 350 ಸ್ಥಾನಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ (Tamil Nadu) ಕನಿಷ್ಠ 5 ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.
ಸದ್ಯದಲ್ಲಿ ಜನರ ಮನಸ್ಥಿತಿ ಬಿಜೆಪಿ ಕಡೆಗೆ ವಾಲಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಚಾರ ಜನರ ಮೇಲೆ ಪ್ರಭಾವ ಬೀರಿದೆ. ಆದ್ದರಿಂದ 2019ರ ಫಲಿತಾಂಶಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಖಚಿತ. ಕೇರಳದಲ್ಲಿ ಬಹುಶಃ ಒಂದು ಅಥವಾ ಎರಡು ಸ್ಥಾನಗಳಲ್ಲಿ ಗೆಲ್ಲಬಹುದು. ಇನ್ನೂ 2019ರ ಚುನಾವಣೆಯಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 44 ಸ್ಥಾನಗಳಿಗೆ ಕುಸಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಈ ಬಾರಿ ಬಿಜೆಪಿ ದೇಶದಲ್ಲಿ ಅಭೂತಪೂರ್ವ ಗೆಲುವು ಸಾಧಿಸಲಿದೆ. ಅದಕ್ಕೆ ಕಾರಣವೂ ಇದೆ. ಇಂದಿನ ಜನ ಜೀವನ ಮಟ್ಟ ಸಾಕಷ್ಟು ಸುಧಾರಣೆ ಕಂಡಿದೆ. ಭಾರತ ಆರ್ಥಿಕತೆಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಬಹಳಷ್ಟು ಸಂಖ್ಯೆಯ ಜನ ಬಡತನದಿಂದ ಹೊರಬಂದಿದ್ದಾರೆ. ಜೊತೆಗೆ 2019ಕ್ಕಿಂತಲೂ ಮುಂಚೆ ಇದ್ದ ನಿರುದ್ಯೋಗಿಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಕಳೆದ 10 ವರ್ಷಗಳಲ್ಲಿ ಈ ಬೆಳವಣಿಗೆಯಾಗಿದೆ, ಈ ಎಲ್ಲ ಕಾರಣಗಳಿಂದ ಬಿಜೆಪಿ ಕಳೆದ ಚುನಾವಣೆಗಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಇಂದು ಕೆಲವು ಕಡೆ ಮಳೆ ನಿರೀಕ್ಷೆ ಇದೆ. ಈಗಿನಂತೆ ರಾಜ್ಯದ ಎಪ್ರಿಲ್ 9ರಿಂದ…
ವಿಶ್ವದ ಪ್ರಮುಖವಾದ 107 ಬೆಳೆಗಳಲ್ಲಿ ಸುಮಾರು 70% ಗೆ ಬೆಳೆಗಳು ಜೇನುನೊಣಗಳಂತಹ ಪರಿಸರ…
ಬಂಡಿಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಬಾರದು ಎಂದು…
ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ…
ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ಬಂದರೆ ಭಾರತವು ಶೇಕಡ 1.5…
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರ ಮಳೆಯಾಗಲಿದೆ ಎಂದು…