ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.ಈ ಮುನ್ನ, ಗುಜರಾತ್ ನ ಎಟಿಎಸ್ ತಂಡಕ್ಕೆ ಡಿಜಿಟಲ್ ವಿಡಿಯೋ ರೆಕಾರ್ಡರ್ ಪತ್ತೆಯಾಗಿತ್ತು.ಬ್ಲಾಕ್ ಬಾಕ್ಸ್ ನಲ್ಲಿ ವಿಮಾನದ ವೇಗ,ಎತ್ತರ, ಎಂಜಿನ್ ಪರಿಸ್ಥಿತಿ, ಕಾಕ್ ಪಿಟ್ ನ ಧ್ವನಿ ದಾಖಲೆ, ಪೈಲೆಟ್ ಮತ್ತು ಏರ್ ಟ್ರಾಫಿಕ್ ಕಂಟ್ರೋಲ್ ಕೇಂದ್ರದ ನಡುವಿನ ಸಂವಹನ ಮಾಹಿತಿ ಸೇರಿದಂತೆ ಹಲವು ವಿವರಗಳು ಇರಲಿವೆ. ಅಪಘಾತದ ಕಾರಣ ಪತ್ತೆಯಲ್ಲಿ ಈ ಬ್ಲಾಕ್ ಬಾಕ್ಸ್ ಮುಖ್ಯ ಪಾತ್ರ ವಹಿಸಲಿದೆ.
ಈ ಮಧ್ಯೆ, ಗಾಯಾಳುಗಳ ಚಿಕಿತ್ಸೆಗಾಗಿ ಅಹಮದಾಬಾದ್ ನ ಮಿಲಿಟರಿ ದಂಡು ಪ್ರದೇಶದಲ್ಲಿ ಭಾರತೀಯ ಸೇನೆ ರಕ್ತದಾನ ಶಿಬಿರ ಆಯೋಜಿಸಿದ್ದು, ಇದಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.ಗಾಯಾಳುಗಳ ಕುಟುಂಬದವರಿಗೆ ಸಿವಿಲ್ ಆಸ್ಪತ್ರೆಯಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ವಸತಿ ಇಲಾಖೆಯಿಂದ ಕುಟುಂಬದವರಿಗೆ ವಸತಿ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸಲಾಗಿದೆ. ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನಾ ಪಡೆ -ಎನ್ ಡಿಆರ್ ಎಫ್ ಮಹಾನಿರ್ದೇಶಕ ಹರಿ ಓಂ, ಪರಿಹಾರ ಕಾರ್ಯಾಚರಣೆಯಲ್ಲಿ ಎನ್ ಡಿಆರ್ ಎಫ್ ನ ಆರು ತಂಡಗಳು ನಿರತವಾಗಿವೆ. ಕೇಂದ್ರ ಮತ್ತು ರಾಜ್ಯದ ಇತರ ಸಂಸ್ಥೆಗಳೊಂದಿಗೆ ಸಮನ್ವಯದಿಂದ, ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…